ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಬಹುದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶ: ಒಟ್ಟು 2,975 ಹುದ್ದೆಗಳು - Mahanayaka
10:35 AM Thursday 17 - October 2024

ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಬಹುದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶ: ಒಟ್ಟು 2,975 ಹುದ್ದೆಗಳು

kptcl recruitment
17/10/2024

KPTCL Recruitment 2024 — ಕೇವಲ 10ನೇ ತರಗತಿ ಪಾಸಾದವರಿಗೆ ವಿವಿಧ ಹುದ್ದೆಗಳ ಅವಕಾಶವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ನೀಡಿದೆ. ಕರ್ನಾಟಕ ರಾಜ್ಯದ್ಯಂತ ಒಟ್ಟು 2,975 ಕಿರಿಯ ಪವರ್ ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಯ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಈಗಾಗಲೇ ಅಧಿಸೂಚನೆ ಬಿಡುಗಡೆ ಮಾಡಿದೆ.

ಒಟ್ಟು ಹುದ್ದೆಗಳಲ್ಲಿ, ಹುದ್ದೆಗಳ ವಿಂಗಡಣೆಯು ಹೀಗಿದೆ :

ಒಟ್ಟು 2,975 ಹುದ್ದೆಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಹಾಗೂ ಕಿರಿಯ ಪವರ್ ಮೆನ್ ಹುದ್ದೆಗಳ ವಿಂಗಡಣೆಯು ಕೆಳಗಿನಂತಿದೆ.

* ಕಿರಿಯ ಸ್ಟೇಷನ್ ಪರಿಚಾರಕ – 433 ಹುದ್ದೆಗಳು

* ಕಿರಿಯ ಪವರ್ ಮೆನ್ – 2,542 ಹುದ್ದೆಗಳು

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ಅರ್ಹತೆ :

ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಎರಡು ಹುದ್ದೆಗಳಿಗೂ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು. ಅದೇ ರೀತಿ ವಯೋಮಿತಿಯ ಅರ್ಹತೆ ನೋಡುವುದಾದರೆ ಅಭ್ಯರ್ಥಿಯು 18 ವರ್ಷ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಅಭ್ಯರ್ಥಿಗಳ ವರ್ಗಗಳಿಗೆ ಅನುಗುಣವಾಗಿ ವಿಂಗಡಿಸಲಾಗಿದೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ತಿಂಗಳ ಸಂಬಳ :

ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೊದಲ 3 ವರ್ಷ ಮಾಸಿಕ ವೇತನವು ಈ ಕೆಳಗಿನಂತಿರುತ್ತದೆ.

1ನೇ ವರ್ಷ – 17,000/-, 2ನೇ ವರ್ಷ – 19,000/-, 3ನೇ ವರ್ಷ – 21,000ರೂ. ನಂತರದಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ವೇತನವು 28,550ರೂ. ಯಿಂದ 63,000ರೂ. ವರೆಗೆ ಇರಲಿದೆ.

ಅರ್ಜಿ ಶುಲ್ಕ:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ ಹಾಗೂ ಪ್ರವರ್ಗದ ಅಭ್ಯರ್ಥಿಗಳು ರೂ.614 ಪಾವತಿಸಬೇಕು.

* ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 354 ರೂ. ಪಾವತಿಸಬೇಕು.

ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳ ವಿವರ:

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 21 ಅಕ್ಟೋಬರ್ 2024 ರಿಂದ ಆರಂಭವಾಗಲಿದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು 20 ಸೆಪ್ಟೆಂಬರ್ 2024.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ :

https://kptcl.karnataka.gov.in


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ