ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಹೃದಯಾಘಾತದಿಂದ ಸಾವು!
18/10/2024
ಬೆಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕಾಮಾಕ್ಷಿಪಾಳ್ಯ ಠಾಣೆಯ ಎಎಸ್ ಐ ಶಿವಶಂಕರ್ ಚಾರಿ ಮೃತಪಟ್ಟವರಾಗಿದ್ದಾರೆ. ಗುರುವಾರ ಎಂದಿನಂತೆ ಬೆಳಗ್ಗೆ ಶಿವಶಂಕರ್ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ, ರೌಂಡ್ಸ್ ಗೆ ತೆರಳುವ ಸಂದರ್ಭದಲ್ಲಿ ಅವರು ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥರಾಗಿದ್ದಾರೆ.
ಹೀಗಾಗಿ ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಶಿವಶಂಕರ್ ಅವರು ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
1999ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದ ಶಿವಶಂಕರ್ ಚಾರಿ, ಕಳೆದ ಒಂದೂವರೆ ವರ್ಷಗಳಿಂದ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಎಸ್ ಐ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: