‘ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು 1 ಸಾವಿರ ಕೋಟಿ’ ಎಂದಿದ್ದ ಯತ್ನಾಳ್ ಗೆ ಸಂಕಷ್ಟ!
ದಾವಣಗೆರೆ: ಹೇಳಿಕೆಯೊಂದಕ್ಕೆ ಸಂಬಂಧಿಸಿದಂತೆ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಕೆಲವರು ಮುಖ್ಯಮಂತ್ರಿ ಆಗಬೇಕೆಂದು 1 ಸಾವಿರ ಕೋಟಿ ರೂ. ಇಟ್ಟುಕೊಂಡು ಕಾಯುತ್ತಾ ಇದ್ದಾರೆ ಎಂದು ದಾವಣಗೆರೆ ಜಿಎಂಐಟಿಯಲ್ಲಿ ಗೆಸ್ಟ್ ಹೌಸ್ ನಲ್ಲಿ ಯತ್ನಾಳ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ಬೆಂಗಳೂರಿನ ರಾಜಾಜಿನಗರದ ಮನೋಹರ್ ಎಂಬುವರು ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇದೀಗ ದೂರು ದಾವಣಗೆರೆ ಗಾಂಧಿನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.
ಯತ್ನಾಳ್ ಅವರು ನಮ್ಮಲ್ಲೂ ಭ್ರಷ್ಟಾಚಾರದಿಂದ ಮಾಡಿದ ಬಹಳಷ್ಟು ದುಡ್ಡು ಇರುವಂತಹ ಕೆಲವರಿಗೆ ಕುದುರೆ ವ್ಯಾಪಾರದ ಆಸೆ ಇರಬಹುದು. ಬಿಜೆಪಿ ಪಕ್ಷ ಕುದುರೆ ವ್ಯಾಪಾರವನ್ನು ಒಪ್ಪುವುದಿಲ್ಲ. ಆದರೆ, ಕೆಲವರು 1 ಸಾವಿರ ಕೋಟಿ ರೂಪಾಯಿ ಇಟ್ಕೊಂಡು ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಪ್ಲ್ಯಾನ್ ಮಾಡಿದ್ದು ಮುಖ್ಯಮಂತ್ರಿಯಾಗಲು ಮುಂದಾಗಿದ್ದಾರೆ ಎಂದಿದ್ದರು.
ಒಂದು ಸಾವಿರ ಕೋಟಿ ರೂಪಾಯಿ ಇಟ್ಕೊಂಡು ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಹೊರಟಿರುವವರ ಬಳಿ ಮನೆಯಲ್ಲಿ ನೋಟಿನ ಮಿಷಿನ್ ಕೂಡ ಇದೆ ಎಂದು ಯತ್ನಾಳ್ ಆರೋಪಿಸಿದ್ದರು.
ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಂಕಷ್ಟ!
ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾಗಿರುವ ದಿನೇಶ್ ಗುಂಡೂರಾವ್ ಅವರ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್ 29 ರಂದು ಮಾನ್ಯ ಮಾಡಿದ್ದ ನ್ಯಾಯಾಲಯ ಶಾಸಕ ಯತ್ನಾಳ್ ಅಕ್ಟೋಬರ್ 16 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿತ್ತು.
ಆದ್ರೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಚಾರಣೆಗೆ ಹಾಜರಾಗದ ಹಿನ್ನೆಲೆ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಆದೇಶಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.
ಸದ್ಯ 42 ನೇ ಎಸಿಎಂಎಂ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಅವರು ಯತ್ನಾಳ್ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಆದೇಶಿಸಿದೆ. ಅಕ್ಟೋಬರ್ 28ರ ಒಳಗೆ ವಾರೆಂಟ್ ಜಾರಿಗೆ ಆದೇಶ ಹೊರಡಿಸಿದ್ದಾರೆ. ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ಅವರು ದೂರು ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಯಾವ ಕ್ಷಣದಲ್ಲಾದರೂ ಶಾಸಕರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: