ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳಿಂದಲೇ ಎಣ್ಣೆ ಪಾರ್ಟಿ!
19/03/2021
ಬೆಳಗಾವಿ: ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಸಿಬ್ಬಂದಿಗಳಿಬ್ಬರು ಧೂಮಪಾನ ಹಾಗೂ ಮದ್ಯಪಾನ ಮಾಡಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಡಿಗ್ರೂಪ್ ಸಿಬ್ಬಂದಿ ಸಾರಿಕಾ ಮತ್ತು ಗುತ್ತಿಗೆ ಆಧಾರದ ನರ್ಸ್ ಶೈಲಾ ಎಂಬವರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೇ ಎಣ್ಣೆ ಪಾರ್ಟಿ ಮಾಡಿ ಫೋಟೋ ತೆಗೆಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹರಿಯಬಿಟ್ಟು ಇದೀಗ ಈ ಇಬ್ಬರು ಸಿಬ್ಬಂದಿ ಸಿಕ್ಕಿ ಹಾಕಿಕೊಂಡಿದ್ದಾರೆ.
ಸದ್ಯ ಈ ಪ್ರಕರಣದ ಸತ್ಯಾಸತ್ಯತೆಯನ್ನು ಪೊಲೀಸರು ಪರಿಶೀಲನೆ ನಡೆಸಬೇಕು ಎಂಬ ಬಗ್ಗೆ ಆಗ್ರಹ ಕೇಳಿ ಬಂದಿದೆ. ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡುವಂತಹ ಜವಾಬ್ದಾರಿಯುತ ಸ್ಥಳದಲ್ಲಿ ಇಂತಹ ನಡತೆ ಸರಿಯಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.