ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅರೆಸ್ಟ್: ಈ ಪ್ರಕರಣದಲ್ಲಿ ಪ್ರಲ್ಹಾದ್ ಜೋಶಿ ಪಾತ್ರವಿಲ್ಲ: ದೂರುದಾರೆ ಸ್ಪಷ್ಟನೆ
ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 2 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅರೆಸ್ಟ್ ಆಗಿದ್ದಾರೆ.
ಈ ಬಗ್ಗೆ ದೂರುದಾರೆ ಸುನೀತಾ ಚೌಹಾಣ್ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದ್ದು, ಈ ವಂಚನೆ ಪ್ರಕರಣದಲ್ಲಿ ಪ್ರಲ್ಹಾದ್ ಜೋಶಿ ಅವರ ಪಾತ್ರ ಏನೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಟಿಕೆಟ್ ಕೊಡಿಸುವುದಾಗಿ ಗೋಪಾಲ್ ಜೋಶಿ 2 ಕೋಟಿ ರೂ. ಬೇಡಿಕೆ ಇಟ್ಟಿದ್ದು, 25 ಲಕ್ಷ ರೂ. ಹಣ ಪಡೆದಿದ್ದರು. ಆದರೆ ಟಿಕೆಟ್ ಸಿಗದಿದ್ದಾಗ ಕೊಟ್ಟ ಹಣ ವಾಪಸ್ ನೀಡಿರಲಿಲ್ಲ. ಹೀಗಾಗಿ ನಾವು ಅನಿವಾರ್ಯವಾಗಿ ದೂರು ಕೊಟ್ಟಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಗೋಪಾಲ್ ಜೋಶಿ ಬಂಧನದ ಬೆನ್ನಲ್ಲೇ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ಗೋಪಾಲ್ ಜೋಶಿ ನಿವಾಸಕ್ಕೆ ದೂರುದಾರೆ ಸುನೀತಾ ಚೌಹಾಣ್ ಅವರನ್ನು ಪೊಲೀಸರು ಕರೆತಂದು ಸ್ಥಳ ಮಹಜರು ಮಾಡಿದ್ದಾರೆ. ಗೋಪಾಲ್ ಜೋಶಿ ನಿವಾಸದಲ್ಲಿ ಪೊಲೀಸರಿಂದ ಪಂಚನಾಮೆ ಮಾಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: