ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನ
ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿದ್ದ ಸರೋಜಾ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ ಪಾರ್ಥಿವ ಶರೀರವನ್ನು ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.
ಇಂದು ಬೆಳಿಗ್ಗೆ 07:04 ಕ್ಕೆ ಸುದೀಪ್ ಅವರ ತಾಯಿ ನಿಧನರಾಗಿದ್ದಾರೆ. ತಾಯಿಯ ಅನಾರೋಗ್ಯದ ಕಾರಣದಿಂದಾಗಿ ನಿನ್ನೆ ಬಿಗ್ ಬಾಸ್ ಶೂಟಿಂಗ್ ಬೇಗನೇ ಮುಗಿಸಿ ಸುದೀಪ್ ತೆರಳಿದ್ದರು ಎನ್ನಲಾಗಿದೆ. ನಿನ್ನೆಯ ವಾರದ ಪಂಚಾಯಿತಿ, ಸಾಮಾನ್ಯಕ್ಕಿಂತಲೂ ಕಡಿಮೆ ಅವಧಿಗೆ ಪ್ರಸಾರವಾಗಿತ್ತು.
ಇತ್ತೀಚೆಗಷ್ಟೆ ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್ ಅವರು ಅವರ ತಾಯಿಯನ್ನು ನೆನಪಿಸಿಕೊಂಡಿದ್ದರು. ಈ ಸೀಸನ್ ನ ಮೊದಲ ವೀಕೆಂಡ್ ಪಂಚಾಯಿತಿಗೆ ಬಂದಿದ್ದ ಸುದೀಪ್ ಶೇರವಾನಿ ಹಾಕಿಕೊಂಡು ಬರಿಗಾಲಲ್ಲಿ ವೇದಿಕೆಗೆ ಹತ್ತಿದ್ದರು. ನವರಾತ್ರಿ ಇದ್ದ ಕಾರಣ ತಾವು ಹೀಗೆ ಡ್ರೆಸ್ ಮಾಡಿಕೊಂಡು ಬಂದಿದ್ದಾಗಿ ಹೇಳಿದ ಸುದೀಪ್, ಕ್ಯಾಮೆರಾ ನೋಡಿಕೊಂಡು ‘ಅಮ್ಮ ನೋಡಿ, ಬರಿಗಾಲಲ್ಲಿ ಬಂದಿದ್ದೀನಿ, ಹಬ್ಬಕ್ಕೆ ತಕ್ಕಂತೆ ಡ್ರೆಸ್ ಮಾಡಿಕೊಂಡಿದ್ದೀನಿ’ ಎಂದಿದ್ದರು.
ಕಿಚ್ಚ ಸುದೀಪ್ ಅವರ ತಾಯಿ ಮಂಗಳೂರು ಮೂಲದವರಾಗಿದ್ದಾರೆ. ಅವರ ಮಾತೃ ಭಾಷೆ ತುಳುವಾಗಿದೆ. ತಾಯಿಯ ಮಾತೃಭಾಷೆ ಕಿಚ್ಚ ಸುದೀಪ್ ಅವರಿಗೆ ಬಹಳ ಇಷ್ಟ ಅಂತ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: