ಜಮ್ಮು&ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಮೂವರು ಕಾರ್ಮಿಕರ ಹತ್ಯೆ: 3 ದಿನಗಳಲ್ಲಿ 2 ನೇ ದಾಳಿ
ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ ಭಾನುವಾರ ಸಂಜೆ ಭಯೋತ್ಪಾದಕರು ಮೂವರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಝೀ ನ್ಯೂಸ್ ಟೆಲಿವಿಷನ್ ವರದಿ ಮಾಡಿದೆ. ಈ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದ ಬಳಿ ಈ ದಾಳಿ ನಡೆದಿದೆ. ಮಧ್ಯ ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಗಗನೀರ್ ಅನ್ನು ಸೋನಾಮಾರ್ಗ್ ಗೆ ಸಂಪರ್ಕಿಸುವ ಝಡ್ ಮೋರ್ಹ್ ಸುರಂಗದಲ್ಲಿ ಇವರು ಕೆಲಸ ಮಾಡುತ್ತಿದ್ದರು. ದಾಳಿಯ ನಂತರ ಭದ್ರತಾ ಪಡೆಗಳು ಕೂಡಲೇ ಸ್ಥಳಕ್ಕೆ ತಲುಪಿದವು.
ದೀರ್ಘಕಾಲದ ನಂತರ ಕಾಶ್ಮೀರದಲ್ಲಿ ಮತ್ತೊಮ್ಮೆ ಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದಕ್ಕೂ ಮುನ್ನ ಶುಕ್ರವಾರ ಭಯೋತ್ಪಾದಕ ದಾಳಿಯಲ್ಲಿ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದರು. ದಕ್ಷಿಣ ಕಾಶ್ಮೀರದ ಶೋಪಿಯಾನ್ನ ವಂಡಿನಾ ಪ್ರದೇಶದಲ್ಲಿ ಗುಂಡು ತಗುಲಿದ ಗಾಯಗಳೊಂದಿಗೆ ನಿಗೂಢ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದೆ. ಮೃತನನ್ನು ಬಿಹಾರದ ಬಹಗಲ್ಪುರ ನಿವಾಸಿ ಅಶೋಕ್ ಕುಮಾರ್ ಚೌಹಾಣ್ ಎಂದು ಗುರುತಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth