10 ವರ್ಷದ ಶ್ರವಣದೋಷವುಳ್ಳ ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿಯ ಬಂಧನ

ಉತ್ತರ ಪ್ರದೇಶದ ಲಲಿತ್ಪುರ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಶ್ರವಣದೋಷವುಳ್ಳ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 42 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಟೋಬರ್ 20 ರಂದು ಅಪರಿಚಿತ ವ್ಯಕ್ತಿಯೊಬ್ಬ 10 ವರ್ಷದ ಬಾಲಕಿಯ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಆರೋಪಿಗಳನ್ನು ಬಂಧಿಸುವವರಿಗೆ 25,000 ರೂ.ಗಳ ಬಹುಮಾನವನ್ನೂ ಘೋಷಿಸಲಾಗಿತ್ತು.
ತನಿಖೆಯ ಸಮಯದಲ್ಲಿ ಆರೋಪಿಯನ್ನು ಮನೋಹರ್ ರೈಕ್ವಾರ್ ಅಲಿಯಾಸ್ ಮನೋಜ್ ಅಲಿಯಾಸ್ ಮನೋ ಎಂದು ಗುರುತಿಸಲಾಗಿದೆ.
ನಂತರ ಆತನನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಲಲಿತ್ಪುರದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮೊಹಮ್ಮದ್ ಮುಷ್ತಾಕ್ ತಿಳಿಸಿದ್ದಾರೆ. ಬಾಲಕಿ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಸುಧಾರಿಸುತ್ತಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth