ಲೆಬನಾನ್ ಹಾಗೂ ಗಾಝಾದ ಮೇಲೆ ಇಸ್ರೇಲ್ ನಿಂದ ವಾಯುಸೇನೆ ದಾಳಿ
ಲೆಬನಾನ್ ಹಾಗೂ ಗಾಝಾದ ಮೇಲೆ ಇಸ್ರೇಲ್ ವಾಯುಸೇನೆ ದಾಳಿಯನ್ನು ಮುಂದುವರಿಸಿದೆ. ಶುಕ್ರವಾರ ನಡೆದ ಬಾಂಬ್ ದಾಳಿಯಲ್ಲಿ ಗಾಜಾದಲ್ಲಿ 95 ಮಂದಿ ಮೃತಪಟ್ಟಿದ್ದಾರೆ. ಇನ್ನು ಲೆಬನಾನ್‌ಗೆ ರಾಜಧಾನಿ ಬೈರೂತ್ ನಲ್ಲಿ ಇಸ್ರೇಲ್ ಪಡೆಗಳು ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಿದೆ.
ಲೆಬನಾನ್ ರಾಜಧಾನಿ ಬೈರೂತ್‌ನಲ್ಲಿ ಕನಿಷ್ಠ 10 ಬಾರಿ ಇಸ್ರೇಲ್ ವಾಯುಸೇನೆ ದಾಳಿ ನಡೆಸಿದೆ. ಬಾಂಬರ್ ಜಟ್‌ಗಳು ನಡೆಸಿರುವ ದಾಳಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪ್ರಾಣ ಹಾನಿ ನಡೆದಿದೆ ಎಂಬ ಮಾಹಿತಿಗಳು ಹೊರಬರುತ್ತಿವೆ.
ಪಾಲೆಸ್ತೀನ್ ಗಾಜಾದಲ್ಲಿ ಇಸ್ರೇಲಿ ಪಡೆಗಳು ನಿರಂತರವಾಗಿ ಬಾಂಬ್ ದಾಳಿ ನಡೆಸುತ್ತಿವೆ. ಹಮಾಸ್ ಗುರಿಯಾಗಿರಿಸಿಕೊಂಡು ನಡೆಸುತ್ತಿರುವ ಬಾಂಬ್ ದಾಳಿಯಲ್ಲಿ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ, ಇಲ್ಲದೆ, 95 ಮಂದಿ ಈ ದಾಳಿಯಲ್ಲಿ ಹತರಾಗಿದ್ದಾರೆ.ಇಸ್ರೇಲಿ ಪಡೆಗಳು ಗಾಜಾದಲ್ಲಿ ಆಸ್ಪತ್ರೆಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಗಾಜಾದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಗಾಜಾದಲ್ಲಿ ನಡೆದ ದಾಳಿಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರೂ ಮೃತಪಟ್ಟಿದ್ದಾರೆ.
ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಇಸ್ರೇಲ್ ಪಡೆಗಳು ನಡೆಸಿದ ವಾಯು ದಾಳಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ. ಲೆಬನಾನ್ ದಕ್ಷಿಣ ಭಾಗದ ಪ್ರದೇಶಗಳ ಮೇಲೆ ಇಸ್ರೇಲ್ ಪಡೆಗಳು ಬಾಂಬ್ ದಾಳಿ ನಡೆಸಿವೆ. ಈ ಪ್ರದೇಶಗಳಲ್ಲಿ ಇರುವ ಜನರು ಅಲ್ಲಿಂದ ತೆರಳುವಂತೆಯೂ ಎಚ್ಚರಿಕೆ ನೀಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj