ಸಿದ್ದರಾಮಯ್ಯರ ಕಾಲೆಳೆಯಲು ಹೋಗಿ ಜಾರಿ ಬಿದ್ದ ನಳಿನ್ ಕುಮಾರ್!
ಬೆಂಗಳೂರು: ಸಿದ್ದರಾಮಯ್ಯರ ಕಾಲೆಳೆಯಲು ಹೋಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಖಭಂಗ ಅನುಭವಿಸಿದ ಘಟನೆ ನಡೆದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ನಳಿನ್ ಕುಮಾರ್ ಕಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ.
ತನ್ನ ಗುರುವಿಗೆ ತಿರುಮಂತ್ರ ಹಾಕಿರುವ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದಂತೆಯೇ ಶೀಘ್ರದಲ್ಲಿಯೇ ಕಾಂಗ್ರೆಸ್ ತೊರೆಯಲಿದ್ದಾರೆ. ಅದಕ್ಕಾಗಿ ಅವರು 90 ಜೊತೆ ಬಟ್ಟೆ ಖರೀದಿಸಿದ್ದಾರಂತೆ ಎಂದು ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದರು.
ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯ ವರದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗೆ ದಾನ ಮಾಡಲು ತಾನು ಬಟ್ಟೆ ಖರೀದಿಸಿದ್ದೇನೆ ಎಂದು ಖಡಕ್ ಉತ್ತರ ನೀಡಿದ್ದಾರೆ.
ಬೇಕಿದ್ದರೆ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡುತ್ತೇನೆ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ ನಾಲಗೆ ಕೂಡ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.