IPS ಅಧಿಕಾರಿಗೆ ಬೆದರಿಕೆ: ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಹೆಚ್.ಡಿ.ಕುಮಾರಸ್ವಾಮಿ ಅವರು ತಮಗೆ ಬೆದರಿಕೆ ಹಾಕಿದ್ದಾರೆ ಎಂದು ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಾಗಿದೆ.
ನ್ಯಾಯಾಲಯದ ಆದೇಶದ ಮೇರೆಗೆ ಬಿಎನ್ಎಸ್ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿ ನಂಬರ್ 1 ಆಗಿದ್ದಾರೆ. ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿ ನಂಬರ್ 2 ಆಗಿದ್ದಾರೆ. ಮತ್ತು ಜೆಡಿಎಸ್ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್ 3 ಆಗಿದ್ದಾರೆ.
ಆರೋಪಿಗಳಾದ ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದಾರೆ. ನನಗೆ ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಅಂತ ದೂರಿನಲ್ಲಿ ತಿಳಿಸಲಾಗಿದೆ. 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್ ಐಆರ್ ದಾಖಲಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: