ಹರಾಜಾಗಲಿರುವ 50 ಕಾಂಗ್ರೆಸ್ ಶಾಸಕರು ಯಾರು ಅಂತ ಪಟ್ಟಿಬಿಡುಗಡೆ ಮಾಡಿ: ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಪ್ರಶ್ನೆ
ಬೆಂಗಳೂರು: 50 ಜನ ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು 50 ಕೋಟಿ ಹಣದ ಆಮಿಷವೊಡ್ಡಿದ್ದಾರೆ ಎನ್ನುವ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50 ಜನ ಬಂದರೆ ಸರ್ಕಾರ ರಚನೆ ಮಾಡಲು ಆಗುತ್ತಾ? ಎಂದು ಪ್ರಶ್ನಿಸಿದ್ದಾರೆ. 50 ಜನರಿಗೆ 50 ಕೋಟಿ ಅಂದ್ರೆ 2500 ಕೋಟಿ ಆಗುತ್ತದೆ. ಆ ಹಣ ಎಲ್ಲಿದೆ? ಎಂದು ಅವರು ಪ್ರಶ್ನಿಸಿದರು.
ಯಾವೆಲ್ಲ ಶಾಸಕರು ಹರಾಜಾಗಲಿದ್ದಾರೆ ಎನ್ನುವ ಪಟ್ಟಿಯನ್ನು ಸಿದ್ದರಾಮಯ್ಯ ಬಿಡುಗಡೆ ಮಾಡಲಿ, 2500 ಕೋಟಿ ಎಲ್ಲಿದೆ? ಯಾರ ಮನೆಯಲ್ಲಿದೆ ಎನ್ನುವುದನ್ನು ಹೇಳಲಿ ಎಂದು ಆರ್.ಅಶೋಕ್ ಪ್ರಶ್ನಿಸಿದರು.
ಸಿದ್ದರಾಮಯ್ಯನವರು ತಮ್ಮ ರಾಜೀನಾಮೆಯನ್ನ ಡೈವರ್ಟ್ ಮಾಡಲು ಆ ಹೇಳಿಕೆ ನೀಡಿದ್ದಾರೆ ಎಂದು ಆರ್.ಅಶೋಕ್ ಆರೋಪಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97