ರಾಷ್ಟ್ರೀಯ ಉದ್ಯಾನವನದಲ್ಲಿ ಮೂವರುಬೇಟೆಗಾರರ ಬಂಧನ; ಚಿರತೆ ಚರ್ಮ, ಮಾಂಸ ವಶ
23/11/2024
ಅಸ್ಸಾಂ ಅರಣ್ಯ ಇಲಾಖೆ ಮತ್ತು ಸಶಸ್ತ್ರ ಸೀಮಾ ಬಲ್ (ಎಸ್ಎಸ್ಬಿ) ಸಿಬ್ಬಂದಿ ಕೋಕ್ರಜಾರ್ನ ರಾಯ್ ಮೋನಾ ರಾಷ್ಟ್ರೀಯ ಉದ್ಯಾನವನದಿಂದ ಮೂವರು ಕಳ್ಳ ಬೇಟೆಗಾರರನ್ನು ಬಂಧಿಸಿದ್ದಾರೆ.
ಪ್ರಾಣಿಗಳ ದೇಹದ ಭಾಗಗಳನ್ನು ಕಳ್ಳಸಾಗಣೆ ಮಾಡುವ ಕಾನೂನುಬಾಹಿರ ಕೆಲಸದಲ್ಲಿ ತೊಡಗಿದ್ದ ಮೂವರು ಕಳ್ಳ ಬೇಟೆಗಾರರು ಐದು ಕಿಲೋಗ್ರಾಂಗಳಷ್ಟು ಚಿರತೆ ಮಾಂಸ ಮತ್ತು ಅದರ ಚರ್ಮವನ್ನು ಹೊಂದಿದ್ದಾಗ ಸಿಕ್ಕಿಬಿದ್ದಿದ್ದಾರೆ.
ಬಂಧಿತ ಕಳ್ಳ ಬೇಟೆಗಾರರನ್ನು ಅರಣ್ಯ ಇಲಾಖೆ ವಿಚಾರಣೆ ನಡೆಸಿದಾಗ ಅವರು ಆನೆಗಳು, ಜಿಂಕೆಗಳು ಮತ್ತು ಚಿರತೆಗಳಂತಹ ಪ್ರಾಣಿಗಳ ದೇಹದ ಭಾಗಗಳನ್ನು ದೀರ್ಘಕಾಲದಿಂದ ನೆರೆಯ ದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj