ರದ್ದಾಗುತ್ತಾ ನಟ ದರ್ಶನ್ ಜಾಮೀನು?: ಇಂದು ಭವಿಷ್ಯ ನಿರ್ಧಾರ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ದರ್ಶನ್ ಹೈಕೋರ್ಟ್ ನಿಂದ ಮಧ್ಯಂತರ ಪಡೆದು ಹೊರಗಿದ್ದಾರೆ. ಆದರೆ ಈವರೆಗೆ ಯಾವುದೇ ಶಸ್ತ್ರ ಚಿಕಿತ್ಸೆಗೆ ಒಳಗಾಗದ ಹಿನ್ನೆಲೆ ಅವರ ಜಾಮೀನು ರದ್ದಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ನವೆಂಬರ್ 26ರಂದು ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ಹೈಕೋರ್ಟ್ ಪೀಠದಲ್ಲಿ ದರ್ಶನ್, ಪವಿತ್ರಗೌಡ, ನಾಗರಾಜು ಆರ್., ಅನುಕುಮಾರ್, ಲಕ್ಷ್ಮಣ್ ಎಂ. ಹಾಗೂ ಜಗದೀಶ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಅನಾರೋಗ್ಯದ ಕಾರಣಕ್ಕೆ ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದಾರೆ. ಆದರೆ ಈವರೆಗೆ ಸರ್ಜರಿ ಮಾಡಿಸಿಲ್ಲ. ಸರ್ಜರಿ ಮಾಡಲೇ ಬೇಕು ಎನ್ನುವ ಕಾರಣದಿಂದ ಅವರಿಗೆ ಜಾಮೀನು ನೀಡಲಾಗಿತ್ತು. ಈ ವಿಚಾರ ನ್ಯಾಯಾಲಯದ ವಿಚಾರಣೆ ವೇಳೆ ಚರ್ಚೆಯಾಗಲಿದೆ ಎನ್ನಲಾಗಿದೆ.
ಇನ್ನೊಂದೆಡೆ ರೇಣುಕಾಸ್ವಾಮಿ ಹತ್ಯೆ ಪ್ರಕರಣ ದರ್ಶನ್ ಕೊರಳಿಗೆ ಮತ್ತಷ್ಟು ಬಿಗಿಯಾಗುತ್ತಲೇ ಹೋಗುತ್ತಿದೆ. ಆರೋಪಿಗಳೊಂದಿಗೆ ದರ್ಶನ್ ತೆಗೆಸಿಕೊಂಡಿದ್ದ ಫೋಟೋ ಪೊಲೀಸರಿಗೆ ಲಭಿಸಿದೆ. ಇದು ಈ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗುವ ಸಾಧ್ಯತೆಗಳು ಕಂಡು ಬಂದಿವೆ. ಸರ್ಕಾರಿ ವಕೀಲ ಪ್ರಸನ್ನಕುಮಾರ್ ಈ ಎಲ್ಲ ವಿಚಾರಗಳ ಬಗ್ಗೆ ಪ್ರಬಲವಾಗಿ ವಾದ ಮಂಡಿಸುವ ಸಾಧ್ಯತೆಗಳಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: