ಹಳೆಯ ವೈಷಮ್ಯ: ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ
ರಾಯಚೂರು: ಹಳೆಯ ವೈಷಮ್ಯದ ಹಿನ್ನೆಲೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಬರ್ಬರ ಹತ್ಯೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಾಚನೂರು ಗ್ರಾಮದಲ್ಲಿ ನಡೆದಿದೆ.
ಮಾಚನೂರು ಗ್ರಾಮದ ನಿವಾಸಿ ಸಮೀರ್(29) ಹತ್ಯೆಗೀಡಾಗಿರುವ ಯುವಕ ಎಂದು ಗುರುತಿಸಲಾಗಿದೆ.
ಈ ಹಿಂದೆ ಮೊಹರಂ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಮಾತಿನ ಚಕಮಕಿ ನಡೆದಿತ್ತು.
ಘರ್ಷಣೆ ವೇಳೆ ಸಮೀರ್ ನ ಎದೆಗೆ ಬಲವಾದ ಏಟು ಬಿದ್ದಿದ್ದು, ಪರಿಣಾಮವಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೃತ್ಯದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಸದ್ಯ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: