ನೇತ್ರಾವತಿ ನದಿಯಲ್ಲಿ ಮುಳುಗಿದ್ದ ಯುವಕನ ಮೃತದೇಹ ಪತ್ತೆ
03/12/2024
ಬೆಳ್ತಂಗಡಿ: ನೇತ್ರಾವತಿ ನದಿಗೆ ಇಳಿದು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯ ಈಜುಗಾರರ ಸಹಕಾರದೊಂದಿಗೆ ಮೃತದೇಹವನ್ನು ನದಿಯಿಂದ ಹೊರ ತೆಗೆಯಲಾಗಿದೆ.
ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಈ ಘಟನೆ ನಡೆದಿದ್ದು, ಮೃತಪಟ್ಟವರನ್ನು ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್(38) ಎಂದು ಗುರುತಿಸಲಾಗಿದೆ.
ಸೋಮವಾರ ಸಂಜೆ ನೇತ್ರಾವತಿ ನದಿಗೆ ಇಳಿದಿದ್ದ ಪ್ರಸಾದ್ ನೀರಿನ ಸೆಳೆತಕ್ಕೆ ಸಿಲು ನೀರುಪಾಲಾಗಿದ್ದರು. ಸ್ಥಳೀಯರ ಸಹಕಾರದೊಂದಿಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ, ರಾತ್ರಿ 11ರ ಸುಮಾರಿಗೆ ಮೃತಹದೇಹವನ್ನು ನದಿಯಿಂದ ಮೇಲೆತ್ತಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: