ತಾತ್ಕಾಲಿಕ: ಒಳಸಂಚು ಆರೋಪ; ಎಪಿಸಿಆರ್ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಗೆ ಮಧ್ಯಂತರ ರಕ್ಷಣೆ
ಎಪಿಸಿಆರ್ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಮ್ ಖಾನ್ ಅವರಿಗೆ ದೆಹಲಿ ನ್ಯಾಯಾಲಯವು ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ಒದಗಿಸಿದೆ. ಇವರ ವಿರುದ್ಧ ದಿಲ್ಲಿ ಪೊಲೀಸರು ದ್ವೇಷಕ್ಕೆ ಪ್ರೇರಣೆ ಮತ್ತು ಕ್ರಿಮಿನಲ್ ಒಳಸಂಚು ಪ್ರಕರಣಕ್ಕೆ ಸಂಬಂಧಿಸಿ ಕೇಸು ದಾಖಲಿಸಿಕೊಂಡಿದ್ದರು ಮತ್ತು ಅವರ ಬಂಧನಕ್ಕೆ ಯಾವುದೇ ಮುನ್ಸೂಚನೆಯನ್ನು ನೀಡದೆ ತರಾತುರಿಯೆಯಿಂದ ಬೆಂಗಳೂರಿಗೆ ಬಂದಿದ್ದರು ಅನ್ನುವುದು ಸಾಕಷ್ಟು ವಿವಾದಕ್ಕೆ ಮತ್ತು ಆಕ್ಷೇಪಕ್ಕೆ ಕಾರಣವಾಗಿತ್ತು. ಇದೀಗ ದೆಹಲಿ ನ್ಯಾಯಾಲಯವು ಡಿಸೆಂಬರ್ ಆರರ ವರೆಗೆ ಬಂಧನದಿಂದ ರಕ್ಷಣೆಯನ್ನು ಒದಗಿಸಿದೆ ಮತ್ತು ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ನದೀಮ್ ಖಾನ್ ಗೆ ಸೂಚಿಸಿದೆ.
ಈ ನಡುವೆ ಎಪಿಸಿಆರ್ ಮತ್ತು ನದೀಮ್ ಖಾನ್ ಅವರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ದೆಹಲಿ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಮಿತ್ ಸಿಂಗ್ ಪೊಲೀಸರಿಗೆ ನೋಟಿ ಸು ಜಾರಿ ಮಾಡಿದ್ದಾರೆ. ದಿಲ್ಲಿ ಪೊಲೀಸರು ದಾಖಲಿಸಿರುವ ಎಫ್ ಐ ಆರ್ ಅನ್ನು ರದ್ದುಗೊಳಿಸುವಂತೆ ಈ ಅರ್ಜಿಯಲ್ಲಿ ಕೋರಲಾಗಿದೆ.
ಎಫ್ಐಆರ್ ನ ಪ್ರಕಾರ ರೆಕಾರ್ಡ್ಸ್ ಆಫ್ ಹಿಂದುಸ್ತಾನ್ ಇನ್ ಮೋದಿ ಸರ್ಕಾರ್ ಎಂಬ ಶೀರ್ಷಿಕೆಯ ವಿಡಿಯೋವನ್ನು ಎಪಿಸಿಆರ್ ನ ಯೂಟ್ಯೂಬ್ ನಲ್ಲಿ ಪೋಸ್ಟ್ ಮಾಡಲಾಗಿದೆ. ವಸ್ತು ಪ್ರದರ್ಶನದಲ್ಲಿ ವ್ಯಕ್ತಿಯೊಬ್ಬರು ಅದರಲ್ಲಿರುವ ಮಾಹಿತಿಯನ್ನು ವಿವರಿಸಿದ್ದಾರೆ. ಅವರು ಅಖ್ ಲಾಕ್, ರೋಹಿತ್ ವೇಮುಲ, ಪೆಹ್ಲು ಖಾನ್ ಬಗ್ಗೆ ಮಾತನಾಡುತ್ತಿದ್ದರು ಮತ್ತು 2020ರ ಶಾಹಿನ್ ಭಾಗ್ ಪ್ರತಿಭಟನೆಗಳು ದೆಹಲಿ ಗಲಭೆಗಳನ್ನು ಈ ವಸ್ತು ಪ್ರದರ್ಶನದಲ್ಲಿ ಮಾತಾಡುತ್ತಿದ್ದ ವ್ಯಕ್ತಿ ವಿವರಿಸಿದ್ದಾರೆ.
ಆ ಮೂಲಕ ನಿರ್ದಿಷ್ಟ ಸಮುದಾಯವನ್ನು ಬಲಿಪಶುಗಳಾಗಿ ಚಿತ್ರಿಸಿ ಜನರನ್ನು ಪ್ರಚೋದಿಸಿದ್ದಾರೆ ಎಂದು ಆರೂಪಿಸಲಾಗಿದೆ. ಈ ವಸ್ತು ಪ್ರದರ್ಶನವನ್ನು ಎಪಿಸಿಆರ್ ಹಾಕಲಾಗಿದ್ದು ವಿಡಿಯೋದಲ್ಲಿ ಮಾತಾಡುತ್ತಿರುವ ವ್ಯಕ್ತಿ ನದೀಮ್ ಖಾನ್ ಎಂದು ಪೊಲೀಸರು ಆರೋಪಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj