ರಾಷ್ಟ್ರೀಯ ಬೀಜ ನಿಗಮದಲ್ಲಿದೆ ವಿವಿಧ ಹುದ್ದೆಗಳು: ಸಂಬಳ 80,000ರೂ. ವರೆಗೆ
NSCL Recruitment 2024 — ನ್ಯಾಷನಲ್ ಸೀಡ್ಸ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.
ಯಾವೆಲ್ಲಾ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ? ಅರ್ಜಿ ಸಲ್ಲಿಸುವುದು ಹೇಗೆ? ಕೊನೆಯ ದಿನಾಂಕ ಯಾವಾಗ? ಅರ್ಜಿ ಸಲ್ಲಿಸುವ ಅಧಿಕೃತ ಜಾಲತಾಣದ ವಿವರ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ.
ಹುದ್ದೆಗಳ ವಿವರ :
ಒಟ್ಟು 188 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇವುಗಳಲ್ಲಿ ವಿವಿಧ ವಿಭಾಗಗಳ ಮ್ಯಾನೇಜರ್ ಹುದ್ದೆಗಳು ಹಾಗೂ ಟ್ರೈನಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಹತೆಗಳ ವಿವರ :
ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಪಟ್ಟ ವಿಷಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಐಟಿಐ ಮುಗಿಸಿರಬೇಕು. ಇದರ ಸಂಪೂರ್ಣ ಮಾಹಿತಿಗಾಗಿ ನಿಗಮವು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿ.
ವಯೋಮಿತಿ ಅರ್ಹತೆಗಳು – ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಟ 50 ವರ್ಷದ ಒಳಗಿರಬೇಕು.
ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕದ ವಿವರ :
* ಆರ್ಥಿಕವಾಗಿ ಹಿಂದುಳಿದ ಮತ್ತು ಇತರೆ ಹಿಂದುಳಿದ ವರ್ಗದವರಿಗೆ – ರೂ.500.
* ಪ. ಜಾತಿ, ಪ. ಪಂಗಡ, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ನೇಮಕಾತಿ ಅರ್ಜಿ ಸಲ್ಲಿಕೆಗೆ ಪ್ರಮುಖ ದಿನಾಂಕಗಳು –
* ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ – 26 ಅಕ್ಟೋಬರ್ 2024
* ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ – 08 ಡಿಸೆಂಬರ್ 2024
ನೇಮಕಾತಿ ಅರ್ಜಿ ಸಲ್ಲಿಕೆಯ ಲಿಂಕ್ — https://indiaseeds.com/current-vacancy
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: