‘ಹಠ’ದಲ್ಲೇ ಡಿಸಿಎಂ ಆದ ಏಕನಾಥ್: ಶಿಂಧೆ ಕೆಡವಲು ಪ್ಲ್ಯಾನ್ ಮಾಡಿತ್ತು ಕಮಲ ಪಾಳಯ!
ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಏಕನಾಥ್ ಶಿಂಧೆ ಬಿಜೆಪಿ ಜೊತೆಗೆ ‘ಹಠಮಾರಿ’ ಧೋರಣೆ ಮುಂದುವರೆಸಿದ್ದರೆ, ಹೊಸ ಸರ್ಕಾರದ ಪ್ರಮಾಣ ವಚನದಲ್ಲಿ ಅವರು ಇಲ್ಲದೆ ಮುಂದುವರೆಯಲು ಬಿಜೆಪಿಯ ವರಿಷ್ಠರು ಯೋಜಿಸಿದ್ದರು ಎಂದು ಯುಬಿಟಿ ಶಿವಸೇನಾ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.
ಪ್ರಮಾಣವಚನಕ್ಕೆ ಕೆಲವೇ ಗಂಟೆಗಳ ಮೊದಲು ಶಿವಸೇನೆಯ ಶಾಸಕರೊಬ್ಬರು ಶಿಂಧೆ ಉಪ ಮುಖ್ಯಮಂತ್ರಿಯಾಗುತ್ತಾರೆ ಎಂದು ಖಚಿತಪಡಿಸಿದ್ದರು.
ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್, ಮಹಾಯುತಿಗೆ ಭಾರಿ ಬಹುಮತ ಬಂದರೂ ರಾಜ್ಯ ಸರಕಾರಕ್ಕೆ ಇದುವರೆಗೂ ಪೂರ್ಣ ಪ್ರಮಾಣದ ಸಚಿವ ಸಂಪುಟ ಇಲ್ಲದೇ ಇರುವುದು ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದನ್ನು ಸೂಚಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಭಾರಿ ಜನಾದೇಶದ ಹೊರತಾಗಿಯೂ ಬಿಜೆಪಿ ಸರ್ಕಾರ ರಚಿಸಲು 15 ದಿನಗಳನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.
ಏಕನಾಥ್ ಶಿಂಧೆ ಇಲ್ಲದೆಯೇ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿ ಮುಂದಾಗಿತ್ತು. ಬಿಜೆಪಿ ಮೇಲೆ ಒತ್ತಡ ಹೇರುವ ಹಠಮಾರಿ ಧೋರಣೆ ತಾಳಿದ್ದರೆ, ಅವರು ಇಲ್ಲದೆ ಮುಂದುವರೆಯುವಂತೆ ರಾಜ್ಯ ಬಿಜೆಪಿ ನಾಯಕತ್ವಕ್ಕೆ ಪಕ್ಷದ ವರಿಷ್ಠರು ತಿಳಿಸಿದ್ದರು.” ಎಂದು ರಾವತ್ ಹೇಳಿಕೊಂಡಿದ್ದಾರೆ.
ಪ್ರಮಾಣವಚನ ಸಮಾರಂಭದಲ್ಲಿ ಕೆಲವು ಮುಖಗಳು ಸಂತೋಷವಾಗಿರಲಿಲ್ಲ, 2019 ರಲ್ಲಿ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ಅದೇ ಮುಖಗಳು ಅಸ್ಪಷ್ಟವಾಗಿದ್ದವು ಎಂದು ಅವರು ಹೇಳಿದ್ದಾರೆ.
ಏಕನಾಥ್ ಶಿಂಧೆಗೆ ಉಪ ಮುಖ್ಯಮಂತ್ರಿಯಾಗಲು ಇಷ್ಟವಿರಲಿಲ್ಲ, ಆದರೆ ಬಿಜೆಪಿ ಮತ್ತು ಅವರ ಪಕ್ಷದ ಶಾಸಕರ ಒತ್ತಾಯದ ನಂತರ ಅವರು ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಸೇರಿದ್ದರು. ಹೊಸ ಸರ್ಕಾರದ ಭಾಗವಾಗುತ್ತೇನೋ ಇಲ್ಲವೋ ಎಂಬ ಬಗ್ಗೆ ಅವರು ಮೌನ ತಾಳಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj