ಸುಪ್ರೀಂ ಕೋರ್ಟ್ ನಲ್ಲಿ ಪರ್ಸನಲ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 100ಕ್ಕೂ ಹೆಚ್ಚು ಹುದ್ದೆಗಳು
Supreme Court Recruitment 2024 — ಭಾರತ ಸುಪ್ರೀಂ ಕೋರ್ಟ್ ನಲ್ಲಿ ವಿವಿಧ ಉದ್ಯೋಗ ಅವಕಾಶಗಳಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇದರ ಅವಕಾಶವನ್ನು ಸದುಪಯೋಗಪಡೆಸಿಕೊಳ್ಳಿ.
ಸುಪ್ರೀಂ ಕೋರ್ಟ್ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಯಾವೆಲ್ಲಾ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ? ಅರ್ಹತೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ವಿವರವು ಈ ಲೇಖನದಲ್ಲಿದೆ.
ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ವಿವರ :
ಈ ನೇಮಕಾತಿಯಲ್ಲಿ ಒಟ್ಟು 107 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಹುದ್ದೆಗಳ ವಿಂಗಡಣೆಯು ಈ ಕೆಳಗಿನಂತಿದೆ :
* ಪರ್ಸನಲ್ ಅಸಿಸ್ಟೆಂಟ್ — 43 ಹುದ್ದೆಗಳು
* ಕೋರ್ಟ್ ಮಾಸ್ಟರ್ — 31 ಹುದ್ದೆಗಳು
* ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ — 33 ಹುದ್ದೆಗಳು
ಯಾವ ಯಾವ ಅರ್ಹತೆಗಳನ್ನು ಹೊಂದಿರಬೇಕು?
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಾನೂನು ಪದವಿ ಮುಗಿಸಿದ್ದು, ಕನಿಷ್ಠ 5 ವರ್ಷದ ಅನುಭವ ಹೊಂದಿರಬೇಕು.
ವಯೋಮಿತಿ ಅರ್ಹತೆ ನೋಡುವುದಾದರೆ – ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಮತ್ತು ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 18ರಿಂದ 30 ವರ್ಷದ ಒಳಗಿರಬೇಕು. ಕೋರ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 30ರಿಂದ 45 ವರ್ಷದ ಒಳಗಿರಬೇಕು.
ಹುದ್ದೆಗಳ ನೇಮಕಾತಿ ಆಯ್ಕೆ ಪ್ರಕ್ರಿಯೆ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಟೈಪಿಂಗ್ ಟೆಸ್ಟ್ ನಡೆಸಿ ಉತ್ತಮ ಅಂಕ ಗಳಿಸಿದವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿದ ಅರ್ಜಿ ಶುಲ್ಕ :
* ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1000ರೂ.
* ಪರಿಶೀಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 250ರೂ.
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ — 25 ಡಿಸೆಂಬರ್ 2024
ಅರ್ಜಿ ಸಲ್ಲಿಸುವ ಲಿಂಕ್ : https://cdn3.digialm.com/EForms/configuredHtml/32912/91925/Index.html