SBI ಬ್ಯಾಂಕ್ ನಲ್ಲಿ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ: ಯಾರು ಅರ್ಜಿ ಸಲ್ಲಿಸಬಹುದು? - Mahanayaka
2:45 PM Thursday 12 - December 2024

SBI ಬ್ಯಾಂಕ್ ನಲ್ಲಿ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ: ಯಾರು ಅರ್ಜಿ ಸಲ್ಲಿಸಬಹುದು?

sbi bank
12/12/2024

SBI Bank Junior Associate’s Recruitment 2024:  

ದೇಶದ ಪ್ರಸಿದ್ಧ ರಾಷ್ಟೀಕೃತ ಬ್ಯಾಂಕ್ ಗಳಲ್ಲಿ ಒಂದಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ 50 ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.

ಪ್ರತಿಯೊಬ್ಬ ಅರ್ಹ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗ ಪಡೆಸಿಕೊಳ್ಳಿ. ಈ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ನೇಮಕಾತಿಯ ಮುಖ್ಯ ಮಾಹಿತಿಯ ಸಂಕ್ಷಿಪ್ತ ವಿವರವೂ ಈ ಕೆಳಗಿನ ಲೇಖನದಲ್ಲಿದೆ.

ನೇಮಕಾತಿ ಹುದ್ದೆಗಳ ವಿವರ :

SBI ಬ್ಯಾಂಕ್ ನ ಕಸ್ಟಮರ್ ಸಪೋರ್ಟ್ & ಸೇಲ್ಸ್ ವಿಭಾಗದಲ್ಲಿ ಒಟ್ಟು 50 ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಈ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಡಿಸೆಂಬರ್ 7, 2024ರಿಂದ ಆರಂಭವಾಗಿದ್ದು, ಡಿಸೆಂಬರ್ 27, 2024 ಕೊನೆಯ ದಿನಾಂಕವಾಗಿದೆ.

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು :

ಯಾವುದಾದರು ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅದೇ ರೀತಿ ಅರ್ಜಿ ಸಲ್ಲಿಸಲು 20 ರಿಂದ 28 ವರ್ಷದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಮೀಸಲಾತಿ ವರ್ಗದವರಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನವು ರೂ. 24,050 ರಿಂದ ರೂ. 64,480 ವರೆಗೆ ಇರಲಿದೆ.

ಅರ್ಜಿ ಶುಲ್ಕ:

ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 750ರೂ. ನಿಗದಿಪಡಿಸಲಾಗಿದೆ. ಮೀಸಲಾತಿ ವ್ಯಾಪ್ತಿಯ ವರ್ಗದವರು ಉಚಿತವಾಗಿ ಅರ್ಜಿ ಸಲ್ಲಿಸಬಹುದದು.

ಅರ್ಜಿ ಸಲ್ಲಿಕೆಗಾಗಿ : https://ibpsonline.ibps.in/sbijanov24/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ