ಮೋದಿ, ಯೋಗಿ ವಿರುದ್ಧ ಹೇಳಿಕೆ: ಭಾರೀ ಚರ್ಚೆ ಸೃಷ್ಟಿಸಿದ ಶಂಕರಾಚಾರ್ಯರ ಮಾತು
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿರುದ್ಧ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಅವರು ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಒಳಗಾಗಿದೆ. ಭಾರತದಲ್ಲಿ ಸಶಕ್ತ ನ್ಯಾಯಾಂಗ ವ್ಯವಸ್ಥೆ ಇದ್ದಿರುತ್ತಿದ್ದರೆ ಮೋದಿ ಮತ್ತು ಯೋಗಿ ಜೈಲಿನಲ್ಲಿ ಇರುತ್ತಿದ್ದರು ಎಂದು ಅವರು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನದ ದೇವಸ್ಥಾನ ಸಮಿತಿಯ ಧರ್ಮಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಂಕರಾಚಾರ್ಯ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ವಿರುದ್ಧ ತೀವ್ರ ಆಕ್ಷೇಪದ ಮಾತುಗಳನ್ನಾಡಿದ್ದಾರೆ.
ಭಾರತದಲ್ಲಿ ಸಶಕ್ತ ನ್ಯಾಯಾಂಗ ವ್ಯವಸ್ಥೆ ಇದ್ದಿರುತ್ತಿದ್ದರೆ ಮೋದಿ ಮತ್ತು ಯೋಗಿ ಜೈಲು ಪಾಲಾಗಿರುತ್ತಿದ್ದರು ಎಂದವರು ಹೇಳಿದ್ದಾರೆ.
ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿಯವರು ಸ್ವಾಮೀಜಿಯವರನ್ನು ಹೊಗಳಿದ್ದಾರೆ, ನಿರ್ಭೀತ ಜಗದ್ಗುರು ಎಂದವರು ಕರೆದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj