ಡಿಜಿಟಲ್ ಅರೆಸ್ಟ್ ನಿಂದ ವೃದ್ಧೆಗೆ 80 ಲಕ್ಷ ಮೋಸ ಮಾಡಿದ ಕಿರಾತಕರು
ರಾಜಸ್ಥಾನದ ಅಜ್ಮೀರ್ ನಲ್ಲಿ ವಯಸ್ಸಾದ ಮಹಿಳೆಯೊಬ್ಬರನ್ನು ಮುಂಬೈ ಸೈಬರ್ ಕ್ರೈಮ್ ಶಾಖೆಯ ಅಧಿಕಾರಿಗಳಂತೆ ನಟಿಸಿ ವಂಚಕರು ‘ಡಿಜಿಟಲ್ ಬಂಧನ’ ಕ್ಕೆ ಒಳಪಡಿಸಿದ ನಂತರ 80 ಲಕ್ಷ ರೂಪಾಯಿ ಎಗರಿಸಿ ವಂಚನೆ ಮಾಡಿದ್ದಾರೆ.
ನವೆಂಬರ್ 23 ರಿಂದ ನವೆಂಬರ್ 30 ರವರೆಗಿನ ಒಂದು ವಾರದಲ್ಲಿ ವಂಚಕರು ವಾಟ್ಸಾಪ್ ವಿಡಿಯೋ ಕರೆ ಮೂಲಕ ಸಂತ್ರಸ್ತೆಯನ್ನು ಸಂಪರ್ಕಿಸಿ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸುಳ್ಳು ಆರೋಪಿಸಿದಾಗ ಈ ವಂಚನೆ ನಡೆದಿದೆ. ನಂತರ ಅವರು ತಮ್ಮ ಬೇಡಿಕೆಗಳನ್ನು ಪೂರೈಸಲು ಆಕೆಯನ್ನು ಕುಶಲತೆಯಿಂದ ಬಳಸಿಕೊಳ್ಳುವ ಮೂಲಕ ಹಣವನ್ನು ಸುಲಿಗೆ ಮಾಡಿದ್ದಾರೆ.
ಆರಂಭದಲ್ಲಿ ಅಜ್ಮೀರ್ ನಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ನಂತರ ಜೈಪುರದ ಸೈಬರ್ ಕ್ರೈಮ್ ಪೊಲೀಸ್ ಸ್ಟೇಷನ್ ಗೆ ವರ್ಗಾಯಿಸಲಾಯಿತು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮೊಹೇಶ್ ಚೌಧರಿ ನೇತೃತ್ವದ ವಿಶೇಷ ತನಿಖಾ ತಂಡವು ಕಳುವಾದ ಹಣವನ್ನು ಪತ್ತೆಹಚ್ಚಿದ್ದು, ಅದನ್ನು 150 ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj