ಎರಡು ಕಾರು—ಲಾರಿ ನಡುವೆ ಸರಣಿ ಅಪಘಾತ: 4 ಎಮ್ಮೆಗಳು ಸಾವು - Mahanayaka
9:24 PM Wednesday 5 - February 2025

ಎರಡು ಕಾರು—ಲಾರಿ ನಡುವೆ ಸರಣಿ ಅಪಘಾತ: 4 ಎಮ್ಮೆಗಳು ಸಾವು

chithradurga
15/12/2024

ಚಿತ್ರದುರ್ಗ: ಎರಡು ಕಾರು ಹಾಗೂ ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ 4 ಎಮ್ಮೆಗಳು ಸಾವನ್ನಪ್ಪಿರುವ ಘಟನೆ  ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರ್ಘಟನೆ ನಡೆದಿದೆ.  ಅದೃಷ್ಟವಶಾತ್ ಎರಡೂ ವಾಹನದಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೇ ಪರಾಗಿದ್ದಾರೆ. ಆದರೆ ಕಾರುಗಳು ನಜ್ಜುಗುಜ್ಜಾಗಿದೆ.

ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಎಮ್ಮೆಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ