ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿ ವೇತನ: ಲೇಬರ್ ಕಾರ್ಡ್ ಇದ್ದವರು ಈಗಲೇ ಅರ್ಜಿ ಸಲ್ಲಿಸಿ
Labour Department Scholarship 2024 — ಕರ್ನಾಟಕ ಸರ್ಕಾರದ, ಕರ್ನಾಟಕ ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಕಾರ್ಮಿಕ ಇಲಾಖೆಯ ಈ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಯಾವೆಲ್ಲ ವಿದ್ಯಾರ್ಥಿಗಳು ಅರ್ಹರಿರುತ್ತಾರೆ? ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ? ಯಾವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯೂ ಈ ಲೇಖನದಲ್ಲಿದೆ.
ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಮುನ್ನ ಈ ಕೆಲಸ ಕಡ್ಡಾಯವಾಗಿ ಮಾಡಿ :
ಕಾರ್ಮಿಕ ಇಲಾಖೆಯ ಈ ವಿದ್ಯಾರ್ಥಿ ವೇತನವನ್ನು ಪಡೆಯಲು ನೀವು, ಅರ್ಜಿ ಸಲ್ಲಿಸುವ ಮುನ್ನ ಡಿಸೆಂಬರ್ 30 2024ರ ಒಳಗಾಗಿ ನೊಂದಣಿ ಸಂಖ್ಯೆ ಮತ್ತು ಉಲ್ಲೇಖ ಸಂಖ್ಯೆಯನ್ನು ನಮೂದಿಸಿ ಆಧಾರ್ ಕಾರ್ಡ್ ಲಿಂಕ್ ಮಾಡಲು ಸೂಚಿಸಲಾಗಿದೆ. ಇಷ್ಟೇ ಅಲ್ಲದೆ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಎನ್‌ಪಿಸಿಎ (NPCI Mapping) ಮ್ಯಾಪಿಂಗ್ ಅಥವಾ ಆಧಾರ್ ಲಿಂಕ್ ಮಾಡಿಸಲು ಸೂಚಿಸಿದೆ.
ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ?
ನೋಂದಾಯಿತ ಲೇಬರ್ ಕಾರ್ಡ್ ಹೊಂದಿದ ಕಾರ್ಮಿಕರ ಮಕ್ಕಳಾಗಿರಬೇಕು. ಅದೇ ರೀತಿ 2023-24 ಮತ್ತು 2024-25ನೇ ಸಾಲಿನಲ್ಲಿ ವಿದ್ಯಾಭ್ಯಾಸ ಮಾಡಿದ ಮತ್ತು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಿರುತ್ತಾರೆ.
ಗಮನಿಸಿ :
ಈ ಹಿಂದೆ ಫ್ರೀ ಮೆಟ್ರಿಕ್ ವಿದ್ಯಾರ್ಥಿಗಳು ಅಂದರೆ 1 ರಿಂದ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಈಗಾಗಲೇ ಕರ್ನಾಟಕ ಸರ್ಕಾರದ ಯಾವುದಾದರೂ ಇಲಾಖೆಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಯನ್ನು ಮುಂದಿನ ವರ್ಷ ಎಸ್ ಎಸ್ ಪಿ (SSP) ತಂತ್ರಾಂಶದ ಸ್ವಯಂ ಚಾಲಿತ ನವೀಕರಣ ತಂತ್ರಾಂಶದ ಮುಖಾಂತರ ಅರ್ಜಿ ಸ್ವೀಕರಿಸುವುದರಿಂದ ಪುನಹ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಇಲಾಖೆಯು ತಿಳಿಸಿದೆ.
ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಕೊನೆಯ ದಿನಾಂಕ ಯಾವಾಗ?
ಅರ್ಹರಿರುವ ಎಲ್ಲಾ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (State Scholarship Portal) ಮುಖಾಂತರ ಡಿಸೆಂಬರ್ 31, 2024ರ ಒಳಗಾಗಿ ಅರ್ಜಿ ಸಲ್ಲಿಸಬೇಕು.
SSP Portal Link : https://ssp.postmatric.karnataka.gov.in/
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: