ವಾದ ವಿವಾದ: ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆ ಮಂಡನೆ
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.
ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆ ತರುವ ಅಗತ್ಯ ಏನಿದೆ ಎಂದು ಸಮಾಜವಾದಿ ಲಕ್ಷದ ಸಂಸದ ಧರ್ಮೇಂದ್ರ ಯಾದವ್ ಪ್ರಶ್ನಿಸಿದ್ದಾರೆ.
ಒಂದು ದೇಶ, ಒಂದು ಚುನಾವಣೆ” ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ(ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಯಲ್ಲಿ ಮಂಡಿಸಿದರು.
ಈ ಮಸೂದೆಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಅಸಂವಿಧಾನಿಕ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಮತ್ತು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ. ಹೀಗಾಗಿ ಮಸೂದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಬಳಿಕ ‘ಒಂದು ದೇಶ, ಒಂದು ಚುನಾವಣೆ’ ಮಸೂದೆಗೆ ಒಪ್ಪಿಗೆ ಪಡೆಯಲು ಮತಯಂತ್ರದ ಮೂಲಕ ಮತಕ್ಕೆ ಹಾಕಲಾಯಿತು. ಮಸೂದೆ ಪರವಾಗಿ 269 ಮತ ಹಾಗೂ ವಿರುದ್ಧವಾಗಿ 198 ಮತಗಳು ಚಲಾವಣೆಯಾಗಿವೆ.
ಒಟ್ಟು 461 ಮತಗಳಲ್ಲಿ ಮೂರನೇ ಎರಡರಷ್ಟು ಬಹುಮತಕ್ಕೆ ಅಂದರೆ, 307 ಮತಗಳ ಅಗತ್ಯವಿತ್ತು. ಆದರೆ ಸರ್ಕಾರವು ಕೇವಲ 269 ಮತಗಳನ್ನು ಪಡೆದುಕೊಂಡಿತು,
ಹೊಸ ಸಂಸತ್ ಭವನದಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರ ಬಳಸಲಾಯಿತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj