ನಟ ದರ್ಶನ್ ಆಸ್ಪತ್ರೆಯಿಂದ ಬಿಡುಗಡೆ!
ಬೆಂಗಳೂರು: ಸ್ಯಾಂಡಲ್ ವುಡ್ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಜಾಮೀನು ದೊರೆತು 2 ದಿನಗಳ ಚಿಕಿತ್ಸೆ ಪಡೆದ ನಂತರ ದರ್ಶನ್ ಮನೆಗೆ ತೆರಳಲಿದ್ದಾರೆ.
ಬೆನ್ನು ನೋವಿನ ಕಾರಣ ಅಕ್ಟೋಬರ್ 31ರಿಂದ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ದರ್ಶನ್ ಫಿಸಿಯೋ ಥೆರಪಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ನಟ ದರ್ಶನ್ ಆಸ್ಪತ್ರೆಯಿಂದ ತಮ್ಮ ಪತ್ನಿಯ ಫ್ಲಾಟ್ ಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ದರ್ಶನ್ ಡಿಸ್ಚಾರ್ಜ್ ಆಗುತ್ತಿದ್ದಂತೆಯೇ ಸಹೋದರ ದಿನಕರ್ ತೂಗುದೀಪ ಹಾಗೂ ಪತ್ನಿ ಆಗಮಿಸಿದ್ದು, ಡಿಸ್ಚಾರ್ಜ್ ಪ್ರಕ್ರಿಯೆಗಳು ನಡೆದಿವೆ. ಸದ್ಯ ದರ್ಶನ್ ಹೊಸಕೆರೆಹಳ್ಳಿ ಫ್ಲಾಟ್ ನಲ್ಲಿ ಉಳಿದುಕೊಳ್ಳಲಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: