ಅಮಿತ್ ಶಾ ಬಗ್ಗೆ ಎಡಿಟ್ ಮಾಡಿದ ವಿಡಿಯೋ ಪೋಸ್ಟ್: ಕಾಂಗ್ರೆಸ್ ನಾಯಕರಿಗೆ ಎಕ್ಸ್ ನಿಂದ ನೋಟಿಸ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕೆಲವು ವೀಡಿಯೊ ತುಣುಕುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಕ್ಕಾಗಿ ತಮ್ಮ ಕೆಲವು ನಾಯಕರಿಗೆ ಸಾಮಾಜಿಕ ಮಾಧ್ಯಮ ಫ್ಲ್ಯಾಟ್ ಫಾರ್ಮ್ ಎಕ್ಸ್ ನಿಂದ ಬುಧವಾರ ನೋಟಿಸ್ ಬಂದಿದೆ ಎಂದು ಕಾಂಗ್ರೆಸ್ ಪಕ್ಷ ಹೇಳಿಕೊಂಡಿದೆ.
ರಾಜ್ಯಸಭೆಯಲ್ಲಿ ಬಿ.ಆರ್.ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಅವರ ಭಾಷಣದ ಎಡಿಟ್ ಮಾಡಿದ ವೀಡಿಯೊಗಳನ್ನು ಕಾಂಗ್ರೆಸ್ ಹಂಚಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದ ನಂತರ ಈ ಬೆಳವಣಿಗೆ ನಡೆದಿದೆ.ಕೇಂದ್ರ ಗೃಹ ಸಚಿವಾಲಯದ ಕೋರಿಕೆಯ ಮೇರೆಗೆ ಕಾಂಗ್ರೆಸ್ ಹ್ಯಾಂಡಲ್ ಗಳಿಗೆ ನೋಟಿಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಭಾರತೀಯ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಅಮಿತ್ ಶಾ ಅವಮಾನಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮಂಗಳವಾರ ಅಮಿತ್ ಶಾ ಅವರ ಭಾಷಣದ ತುಣುಕನ್ನು ಹಂಚಿಕೊಂಡ ನಂತರ ಭಾರೀ ರಾಜಕೀಯ ವಿವಾದ ಭುಗಿಲೆದ್ದಿತ್ತು. ಬಿಜೆಪಿ ಪ್ರತಿದಾಳಿಯನ್ನು ಪ್ರಾರಂಭಿಸಿತು. ಆಗ ಪ್ರಧಾನಿ ನರೇಂದ್ರ ಮೋದಿ ಕೂಡ ಆರೋಪಗಳನ್ನು ಎದುರಿಸಲು ಮುಂದಾಗಬೇಕಾಯಿತು.
“ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಫ್ಯಾಷನ್ ಆಗಿ ಮಾರ್ಪಟ್ಟಿದೆ” ಎಂದು ಅಮಿತ್ ಶಾ ಹೇಳುತ್ತಿರುವ ವೀಡಿಯೊವನ್ನು ಕಾಂಗ್ರೆಸ್ ಹಂಚಿಕೊಂಡಿದೆ. ಅವರು ದೇವರ ನಾಮವನ್ನು ಅನೇಕ ಬಾರಿ ಜಪಿಸಿದ್ದರೆ, ಅವರು ಎಲ್ಲಾ ಏಳು ಜನ್ಮಗಳಲ್ಲಿ ಸ್ವರ್ಗದಲ್ಲಿ ಸ್ಥಾನವನ್ನು ಪಡೆಯುತ್ತಿದ್ದರು” ಇದು ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ಬಿಜೆಪಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj