ಅಂಬೇಡ್ಕರ್ ಭಾವ ಚಿತ್ರ ಪ್ರದರ್ಶಿಸಿ, ಅಮಿತ್ ಶಾಗೆ ಧಿಕ್ಕಾರ ಕೂಗಿದ ಕಾಂಗ್ರೆಸ್ ಶಾಸಕರು
ಬೆಳಗಾವಿ: ಅಂಬೇಡ್ಕರ್ ವಿರುದ್ಧ ಹೇಳಿಕೆ ಹಿನ್ನೆಲೆ ಕರ್ನಾಟಕ ವಿಧಾನಸಭೆ ಹಾಗೂ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಶಾಸಕರು ಅಂಬೇಡ್ಕರ್ ಭಾವ ಚಿತ್ರ ಪ್ರದರ್ಶಿಸಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದರು.
ಇಂದು ವಿಧಾನ ಸಭಾ ಕಲಾಪ ಆರಂಭವಾಗುತ್ತಿದ್ದಂತೆಯೇ ಅಮಿತ್ ಶಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕರು ಚರ್ಚೆಗೆ ಆಗ್ರಹಿಸಿದರು. ಸದನದಲ್ಲಿ ನಿರ್ಣಯ ಕೈಗೊಳ್ಳಲು ಒತ್ತಾಯಿಸಿದರು.
ಕಾಂಗ್ರೆಸ್ ಶಾಸಕರು ಒಟ್ಟಾಗಿ ನಿಂತು ಅಂಬೇಡ್ಕರ್ ಫೋಟೋ ಪ್ರದರ್ಶಿಸಿ, ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಬಿಜೆಪಿ ಶಾಸಕರು, ಕಾಂಗ್ರೆಸ್ ನಿಂದ ಅಂಬೇಡ್ಕರ್ ಅವರಿಗೆ ಅನ್ಯಾಯವಾಗಿದೆ ಎಂದು ಪ್ರತಿಭಟಿಸಿದರು. ಹೀಗಾಗಿ ಗದ್ದಲ ಕೋಲಾಹಲದ ಹಿನ್ನೆಲೆ ಸ್ಪೀಕರ್ ಖಾದರ್ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿಕೆ ಮಾಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: