ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಅಸಂವಿಧಾನಿಕ ಪದ ಪ್ರಯೋಗ!
ಬೆಳಗಾವಿ: ರಾಜ್ಯ ಸಭೆಯಲ್ಲಿ ಅಮಿತ್ ಶಾ(Amit Shah) ಹೇಳಿಕೆ ಖಂಡಿಸಿ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟಿಸುತ್ತಿದ್ದ ವೇಳೆ ಸಿ.ಟಿ.ರವಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಸಂವಿಧಾನಿಕ ಪದ ಪ್ರಯೋಗ ಮಾಡಿರುವ ಆರೋಪ ಕೇಳಿ ಬಂದಿದೆ.
ಪ್ರತಿಭಟನೆ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ವಿರುದ್ಧ ಸಿ.ಟಿ.ರವಿ ಅಸಭ್ಯ ಪದ ಬಳಕೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ಸಿ.ಟಿ.ರವಿ ಆ ಪದ ಬಳಕೆ ಮಾಡಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ದೂರಿದ್ದಾರೆ. ಅವರ ಮಾತಿಗೆ ಇತರ ಸದಸ್ಯರು ಧ್ವನಿಗೂಡಿಸಿದರು. ನಂತರ ಸ್ಪೀಕರ್ ಹೊರಟ್ಟಿ ಕಚೇರಿಗೆ ತೆರಳಿದ ಲಕ್ಷ್ಮೀ ಹೆಬ್ಬಾಳ್ಕರ್ ಸಿ.ಟಿ.ರವಿ ವಿರುದ್ಧ ದೂರು ಸಲ್ಲಿಸಿದ್ದು, ಅವರ ಸದಸ್ಯತ್ವ ರದ್ದು ಮಾಡುವಂತೆ ಮನವಿ ಮಾಡಿದ್ದಾರೆ.
ದೂರು ಸ್ವೀಕರಿಸಿದ ಸ್ಪೀಕರ್ ವಿಡಿಯೋ ಪರಿಶೀಲಿಸಿದ ಬಳಿಕ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಿ.ಟಿ.ರವಿ(CT Ravi) ಅವರು ಆ ಪದ ಬಳಕೆ ಮಾಡಿರುವುದರ ವಿರುದ್ಧ ಕಾಂಗ್ರೆಸ್ ನಾಯಕರು ಗರಂ ಆಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: