ಕಾರಿನ ಮೇಲೆ ಉರುಳಿಬಿದ್ದ ಕಂಟೈನರ್ : ಒಂದೇ ಕುಟುಂಬದ 6 ಮಂದಿಯ ದಾರುಣ ಸಾವು - Mahanayaka
12:27 PM Wednesday 5 - February 2025

ಕಾರಿನ ಮೇಲೆ ಉರುಳಿಬಿದ್ದ ಕಂಟೈನರ್ : ಒಂದೇ ಕುಟುಂಬದ 6 ಮಂದಿಯ ದಾರುಣ ಸಾವು

nelamangala
21/12/2024

ನೆಲಮಂಗಲ: ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ನಡೆದ ಸರಣಿ ಅಪಘಾತದಲ್ಲಿ  ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.

ತುಮಕೂರು—ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ.  ಕಾರಿನ ಮೇಲೆ ಕಂಟೈನರ್ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದವರು ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು ಎಂದು ಹೇಳಲಾಗಿದೆ. ಅಪಘಾತದಿಂದಾಗಿ ತುಮಕೂರು ರಸ್ತೆಯಲ್ಲಿ ಸುಮಾರು 10 ಕಿ.ಮೀ.ನಷ್ಟು ಟ್ರಾಫಿಕ್ ಜಾಮ್ ಉಂಟಾಯಿತು.

ಕಂಟೈನರ್ ಅಡಿಯಲ್ಲಿ ಸಿಲುಕಿದ್ದ ಕಾರನ್ನು ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು. ಕೊನೆಗೆ 3 ಕ್ರೈನ್ ಗಳ ಸಹಾಯದೊಂದಿಗೆ ಕಾರನ್ನು ಕಂಟೈನರ್ ನ್ನು ಮೇಲೆತ್ತಲಾಯಿತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ