ರೈಲ್ವೆ ಇಲಾಖೆಯಲ್ಲಿ 32 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ: ಉಚಿತವಾಗಿ ಅರ್ಜಿ ಸಲ್ಲಿಸಿ - Mahanayaka

ರೈಲ್ವೆ ಇಲಾಖೆಯಲ್ಲಿ 32 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ: ಉಚಿತವಾಗಿ ಅರ್ಜಿ ಸಲ್ಲಿಸಿ

train
26/12/2024

RRB Jobs 2024 : ರೈಲ್ವೆ ನೇಮಕಾತಿ ಮಂಡಳಿಯು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ 32 ಸಾವಿರಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

ಒಟ್ಟು 32,438 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ.

ಯಾವೆಲ್ಲಾ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ?

ಪಾಯಿಂಟ್ಸ್ ಮನ್ ‘ಬಿ’, ವಿವಿಧ ವಿಭಾಗದಲ್ಲಿ ಸಹಾಯಕ ಹುದ್ದೆಗಳು ಹಾಗೂ ಟ್ರ್ಯಾಕ್ ಮೆಂಟೇನರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಶೈಕ್ಷಣಿಕ ಅರ್ಹತೆಗಳು : ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ 32 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ತಿಳಿದುಕೊಳ್ಳಲು ನೀವು ರೈಲ್ವೆ ನೇಮಕಾತಿ ಮಂಡಳಿಯು ಹೊರಡಿಸಿದ ಅಧಿಸೂಚನೆಯನ್ನು ಪರಿಶೀಲಿಸಿ.

ಅರ್ಜಿ ಶುಲ್ಕ : ಈ ನೇಮಕಾತಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ, ಉಚಿತವಾಗಿ ಅರ್ಜಿ ಸಲ್ಲಿಸಬಹುದು.

 ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಪ್ರಮುಖ ದಿನಾಂಕಗಳು :

* ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾದ ದಿನಾಂಕ : 20 ಡಿಸೆಂಬರ್ 2024

* ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯಗೊಳ್ಳುವ ದಿನಾಂಕ : 30 ಜನವರಿ 2024

ಅಪ್ಲೈ ಮಾಡುವ ಲಿಂಕ್ : https://indianrailways.gov.in/railwayboard/view_section.jsp?lang=0&id=0,7,1281


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ