SBI ಬ್ಯಾಂಕ್ ನಲ್ಲಿ ಮತ್ತೆ 600 ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ನೇಮಕಾತಿ
ಭಾರತೀಯ ಸ್ಟೇಟ್ ಬ್ಯಾಂಕ್ (SBI) ನಲ್ಲಿ ಖಾಲಿ ಇರುವ 600 Probationary Officers (PO) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಇದೀಗ ಹೊಸ ಅಧಿಸೂಚನೆ ಪ್ರಕಟಿಸಿಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ..
ಭಾರತೀಯ ಸ್ಟೇಟ್ ಬ್ಯಾಂಕ್ ನ ಈ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವ ಅರ್ಹತೆಗಳಿರಬೇಕು? ಅರ್ಜಿ ಯಾವಾಗ ಸಲ್ಲಿಸಬೇಕು? ಅರ್ಜಿ ಹೇಗೆ ಸಲ್ಲಿಸಬೇಕೆಂಬ ಮಾಹಿತಿ ಇಲ್ಲಿದೆ.
ಶೈಕ್ಷಣಿಕ ಅರ್ಹತೆಗಳ ಮಾಹಿತಿ – ಈ ಹುದ್ದೆಗಳಿಗೆ ಯಾವುದೇ ಪದವಿ ಮುಗಿಸಿದವರು Any Degree ಅಥವಾ (ಪದವಿ ಅಂತಿಮ ವರ್ಷ/ ಸೆಮಿಸ್ಟರ್ ನಲ್ಲಿ ಓದುತ್ತಿರುವವರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ.
ಆನ್ಲೈನ್ ಅರ್ಜಿ ಸಲ್ಲಿಕೆಗೆ ನಿಗದಿತ ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ – 27 ಡಿಸೆಂಬರ್ 2024 ಅರ್ಜಿ ಸಲ್ಲಿಕೆಗೆ ಮುಕ್ತಾಯ ದಿನಾಂಕ – 16 ಜನವರಿ 2025
ನೇಮಕಾತಿ ಆಯ್ಕೆ ಪ್ರಕ್ರಿಯೆಯ ಪೂರ್ವಭಾವಿ ಪರೀಕ್ಷಾ ದಿನಾಂಕ – 2025 ರ ಮಾಚ್೯ 8 ರಿಂದ 15ರವರೆಗೆ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ಲಿಂಕ್ –
https://bank.sbi/careers
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: