ವಯಾಗ್ರ ಮಾತ್ರೆ ಸೇವಿಸಿ ರಾತ್ರಿಯಿಡೀ ಬಾಲಕಿ ಮೇಲೆ ಅತ್ಯಾಚಾರ: ಬಾಲಕಿ ಸಾವು - Mahanayaka
12:30 PM Wednesday 5 - February 2025

ವಯಾಗ್ರ ಮಾತ್ರೆ ಸೇವಿಸಿ ರಾತ್ರಿಯಿಡೀ ಬಾಲಕಿ ಮೇಲೆ ಅತ್ಯಾಚಾರ: ಬಾಲಕಿ ಸಾವು

viagra
29/12/2024

ಲಕ್ನೋ: ವಯಾಗ್ರ ಮಾತ್ರೆ ಸೇವಿಸಿ 14 ವರ್ಷದ ಬಾಲಕಿಯ ಮೇಲೆ ರಾತ್ರಿಯಿಡೀ ಅತ್ಯಾಚಾರ ನಡೆಸಿದ ಪರಿಣಾಮ ಬಾಲಕಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಲ್ಪುರದಲ್ಲಿ ನಡೆದಿದ್ದು, ಘಟನೆಯ ಬೆನ್ನಲ್ಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕುಲದೀಪ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಬಾಲಕಿಯ ಕುಟುಂಬಸ್ಥರು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು. ಬಾಲಕಿ ಒಬ್ಬಂಟಿಯಾಗಿದ್ದ ವೇಳೆ ಆಕೆಯ ಬಳಿಗೆ ಹೋಗಿದ್ದ ಕುಲದೀಪ್ ವಯಾಗ್ರ(Viagra) ಮಾತ್ರೆ ಸೇವಿಸಿ ರಾತ್ರಿಯಿಡೀ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ನಿರಂತರ ಅತ್ಯಾಚಾರದ ಪರಿಣಾಮ ಹಾಗೂ ವಿಪರೀತ ಚಳಿಯಿಂದಾಗಿ ಬಾಲಕಿ ಪ್ರಜ್ಞಾಹೀನಳಾಗಿ ಬಿದ್ದಿದ್ದು, ಸ್ವಲ್ಪ ಸಮಯದ ಬಳಿಕ ಆಕೆ ಸಾವನ್ನಪ್ಪಿದ್ದಾಳೆ. ಬಾಲಕಿ ಸಾವನ್ನಪ್ಪಿರುವುದು ತಿಳಿಯುತ್ತಿದ್ದಂತೆಯೇ ಆರೋಪಿ ಕುಲದೀಪ್ ಸ್ಥಳದಿಂದ ಪರಾರಿಯಾಗಿದ್ದ.

ಮರುದಿನ ಬೆಳಕ್ಕೆ ಬಾಲಕಿಯ ಕುಟುಂಬಸ್ಥರು ಆಗಮಿಸಿದ ವೇಳೆ ಬಾಲಕಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಅವರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ ವೇಳೆ ವಯಾಗ್ರ ಮಾತ್ರೆಯ ಪ್ಯಾಕೆಟ್ ಗಳು ದೊರೆತಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನ ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ