ಖಾಸಗಿ ಬಸ್—ಕಾರಿನ ನಡುವೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು
29/12/2024
ಶಿವಮೊಗ್ಗ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪ ನಡೆದಿದೆ.
ದೊಡ್ಡಬಳ್ಳಾಪುರ ಮೂಲದ ಶರಣ್ ಹಾಗೂ ಅಕ್ಷಯ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಶಿವಮೊಗ್ಗದಿಂದ ಹೊನ್ನಾವರಕ್ಕೆ ಕಾರು ಚಲಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಖಾಸಗಿ ಬಸ್ ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು.
ಘಟನಾ ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: