ಕೊರೆಯುವ ಚಳಿ ಹಿನ್ನೆಲೆ: ಬೆಂಕಿ ಹಚ್ಚಿ ಮಲಗಿದ್ದ ದಂಪತಿ ಉಸಿರುಗಟ್ಟಿ ಸಾವು
ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಬೆಂಕಿ ಹೊತ್ತಿಸಿಕೊಂಡು ಮಲಗಲು ಹೋದ ದಂಪತಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ರಾಮ್ ಲೀಲಾ ಮೈದಾನ ಪ್ರದೇಶದ ಶಹೀದ್ ನಗರದ ನಿವಾಸಿಗಳಾದ ಘೇವರ್ ದಾಸ್ (53) ಮತ್ತು ಅವರ ಪತ್ನಿ ಇಂದ್ರಾ ದೇವಿ (48) ತಮ್ಮ ಕೋಣೆಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಕೊಟ್ವಾಲಿ ಎಸ್ಎಚ್ಒ ಕಿಶೋರ್ ಸಿಂಗ್ ತಿಳಿಸಿದ್ದಾರೆ.
ದಂಪತಿ ಕೋಣೆಯಲ್ಲಿ ಉರಿಯುತ್ತಿದ್ದ ಬೆಂಕಿಯೊಂದಿಗೆ ಮಲಗಿದ್ದರು. ಬಹುಶಃ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.
ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದರು.ವೈದ್ಯರ ಪ್ರಕಾರ, ಬೆಂಕಿಯ ಹೊಗೆಯಿಂದಾಗಿ ಉಸಿರುಗಟ್ಟಿದ್ದೇ ಸಾವಿಗೆ ಕಾರಣವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj