ಗುತ್ತಿಗೆದಾರ ಸಚಿನ್ ಪ್ರಕರಣ ಸಿಬಿಐಗೆ ನೀಡದಿದ್ದರೆ ಬೃಹತ್ ಹೋರಾಟ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಇಲ್ಲವಾದರೆ, ಜನವರಿ 4ರಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಆದೇಶಿಸಿದರೆ ಒಳ್ಳೆಯದು, ನಾವು ಜನವರಿ 3ರವರೆಗೆ ಕಾಯುತ್ತೇವೆ. ಜ.4ರಂದು ಬೃಹತ್ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಆರೋಪಿ ರಾಜು ಕಪನೂರು ಪ್ರಿಯಾಂಕ್ ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆಗೂ ಇರುವ ಫೋಟೋ ಬಿಡುಗಡೆ ಮಾಡಿ ಅವರು, ಪ್ರಿಯಾಂಕ್ ಖರ್ಗೆ ತಮಗೆ ರಾಜು ಕಪನೂರು ಪರಿಚಯವಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದರು.
ಸಿದ್ದರಾಮಯ್ಯನವರು ನಿಜವಾದ ಅಹಿಂದ ನಾಯಕರಾಗಿದ್ದರೆ, ಪ್ರಕರಣವನ್ನು ಸಿಬಿಐಗೆ ನೀಡಿ ಸಚಿನ್ ಕುಟುಂಬಕ್ಕೆ ನ್ಯಾಯ ಕೊಡಿಸಲಿ ಆಗ ನಾವು ಅವರನ್ನು ಅಹಿಂದ ನಾಯಕ ಎಂದು ಒಪ್ಪಿಕೊಳ್ಳುತ್ತೇವೆ ಎಂದು ವಿಜಯೇಂದ್ರ ಸವಾಲು ಹಾಕಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: