ರಸ್ತೆ ಮಧ್ಯೆಯೇ ಜೆಡಿಎಸ್ ಮುಖಂಡನ ಕೊಚ್ಚಿ ಬರ್ಬರ ಹತ್ಯೆ! - Mahanayaka
3:28 PM Wednesday 5 - February 2025

ರಸ್ತೆ ಮಧ್ಯೆಯೇ ಜೆಡಿಎಸ್ ಮುಖಂಡನ ಕೊಚ್ಚಿ ಬರ್ಬರ ಹತ್ಯೆ!

gold venkatesh
04/01/2025

ಚಿಕ್ಕಬಳ್ಳಾಪುರ:  ರಸ್ತೆ ಮಧ್ಯೆಯೇ ಜೆಡಿಎಸ್ ಮುಖಂಡರೊಬ್ಬರನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ  ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.

ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಹತ್ಯೆಗೀಡಾದವರಾಗಿದ್ದಾರೆ. ವೆಂಕಟೇಶ್ ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಮೆಡಿಕಲ್ ಸ್ಟೋರ್‌ ನಿಂದ ಮನೆಗೆ ತೆರಳುತ್ತಿದ್ದರು. ಈ ವೇಳೆ ಮನೆಯತ್ತ ಸ್ಕೂಟಿ ಮೂಲಕ ಹೊರಟಿದ್ದ ವೆಂಕಟೇಶ್‌ ಅವರನ್ನು  ಅಡ್ಡ ಹಾಕಿ ಲಾಂಗ್‌ ನಿಂದ ಎಡಗೈ ತೋಳಿಗೆ ಬೀಸಿದ್ದು, ಪರಿಣಾಮವಾಗಿ ಕೈ ಕಟ್ ಆಗಿ, ಗಾಡಿ ಸಮೇತ ವೆಂಕಟೇಶ್ ನೆಲಕ್ಕೆ ಬಿದ್ದಿದ್ದಾರೆ. ಕೂಡಲೇ ಮನಸ್ಸೋ ಇಚ್ಛೆ ಮುಖಕ್ಕೆ ಲಾಂಗ್ ನಿಂದ ಕೊಚ್ಚಲಾಗಿದೆ. ಹೊಟ್ಟೆಯ ಭಾಗಕ್ಕೆ ಬಲವಾಗಿ ಬೀಸಲಾಗಿದೆ. ಪರಿಣಾಮ ವೆಂಕಟೇಶ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಊರಿನ ಬಾರ್ ಬಳಿ  ಗ್ರಾಮದ ಕೆಲವು ಯುವಕರು ಕುಡಿದು ಗಲಾಟೆ ಮಾಡುತ್ತಿದ್ದರು. ಹೀಗಾಗಿ ಮೂರು ದಿನಗಳ ಹಿಂದೆ ಅವರಿಗೆ ಬೈದು ಬುದ್ದಿ ಹೇಳಿದ್ದರು. ಹೀಗಾಗಿ ಆ ಹುಡುಗರು ಕೊಲೆ ಮಾಡಿರಬಹುದು ಎಂದು ಹತ್ಯೆಗೀಡಾದವರ ವೆಂಕಟೇಶ್ ಅವರ ಪುತ್ರ ಪೊಲೀಸರ ಬಳಿ ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ  ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಎಸ್​ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ