ರಾಜ್ಯಕ್ಕೆ ಸಿದ್ದರಾಮಯ್ಯ ಹೆಸರಿಡಿ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ
ಮೈಸೂರು: ಇಡೀ ಕರ್ನಾಟಕಕ್ಕೂ ಸಿದ್ದರಾಮಯ್ಯ ಕೊಡುಗೆ ಕೊಟ್ಟಿದ್ದಾರೆ. ಈ ರಾಜ್ಯಕ್ಕೂ ಅವರ ಹೆಸರೇ ಇಟ್ಟು ಬಿಡಲಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರನ್ನು ನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಹಾರಾಜರ ಮನೆತನಕ್ಕೆ ಸರ್ಕಾರ ಯಾಕೆ ಅಪಮಾನ ಮಾಡುತ್ತಿದೆ? ಸಿಎಂ ತಮ್ಮ ಬೆಂಬಲಿಗರನ್ನು ಛೂ ಬಿಟ್ಟು ರಸ್ತೆಗೆ ತಮ್ಮ ಹೆಸರಿಡಿಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಸಿದ್ದರಾಮಯ್ಯ ಹೆಸರನ್ನ ದೇವನೂರು ಬಡಾವಣೆಯ ಕೆಸರೆ ಗ್ರಾಮಕ್ಕೆ ಇಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹೆಸರಿನ ರಾಜಕಾರಣವನ್ನ ಸಿದ್ದರಾಮಯ್ಯ ಕೈಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ, ನನ್ನ ಅವಧಿಯಲ್ಲೂ ಮೈಸೂರಿಗೆ ಬಹಳ ಕೊಡುಗೆ ಕೊಟ್ಟಿದ್ದೇನೆ, ಹಾಗಂತ ನನ್ನ ಹೆಸರಿಡಿ ಎಂದು ಕೇಳಲು ಆಗುತ್ತಾ ಎಂದು ಅವರು ಪ್ರಶ್ನಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: