ಅಂಬೇಡ್ಕರ್ ಫೋಟೋಗೆ ಅವಮಾನಿಸಿ ರೀಲ್ಸ್: ನಾಲ್ವರ ಬಂಧನ
ಬೀದರ್: ಅಂಬೇಡ್ಕರ್ ಭಾವ ಚಿತ್ರಕ್ಕೆ ಅವಮಾನಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಕಲ್ಕೋರಾ ಗ್ರಾಮದವರು ಎಂದು ತಿಳಿದು ಬಂದಿದ್ದು, ಆರೋಪಿಗಳ ಪೈಕಿ ಮೂವರು ಅಪ್ರಾಪ್ತ ಬಾಲಕರಾಗಿದ್ದಾರೆ. ಅಂಬೇಡ್ಕರ್ ಭಾವ ಚಿತ್ರಕ್ಕೆ ಅವಮಾನಿಸಿ ಅದರ ವಿಡಿಯೋವನ್ನು mrk_777_king5 ಎಂಬ ಇನ್ ಸ್ಟಾಗ್ರಾಮ್ ಐಡಿಯಲ್ಲಿ ವೈರಲ್ ಮಾಡಿದ್ದರು.
ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಆರೋಪಿಗಳ ವಿರುದ್ಧ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆ ಪೊಲೀಸರ ಗಮನಕ್ಕೆ ಬಂದ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಂಬೇಡ್ಕರ್ ಫೋಟೋವನ್ನು ನೆಲಕ್ಕೆ ಹಾಕಿ ಭಾವ ಚಿತ್ರದ ಮೇಲೆ ಕಾಲಿಟ್ಟು ಮೆಟ್ಟಿ ಉದ್ದೇಶ ಪೂರ್ವಕವಾಗಿ ಅವಮಾನಿಸುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಆರೋಪಿಗಳ ವಿರುದ್ಧ ಕಲಂ 189(2), 353(2), 298, 190 ಬಿಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7