ಮಹಾತ್ಮ ಗಾಂಧಿ ಪಾಕಿಸ್ತಾನದ ರಾಷ್ಟ್ರಪಿತ ಎಂಬ ಹೇಳಿಕೆ: ಗಾಯಕ ಅಭಿಜಿತ್ ಭಟ್ಟಾಚಾರ್ಯರಿಗೆ ನೋಟಿಸ್
05/01/2025
ಮಹಾತ್ಮ ಗಾಂಧಿ ಅವರನ್ನು ಪಾಕಿಸ್ತಾನದ ‘ರಾಷ್ಟ್ರಪಿತ’ ಎಂದು ಕರೆದಿದ್ದಕ್ಕಾಗಿ ಗಾಯಕ ಅಭಿಜಿತ್ ಭಟ್ಟಾಚಾರ್ಯ ಅವರಿಗೆ ವಕೀಲರೊಬ್ಬರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ.
ತಮ್ಮ ಕಕ್ಷಿದಾರ ಮನೀಶ್ ದೇಶಪಾಂಡೆ ಪರವಾಗಿ ಪುಣೆ ಮೂಲದ ವಕೀಲ ಅಸಿಮ್ ಸೊರ್ಡೆ ಅವರು ಭಟ್ಟಾಚಾರ್ಯ ಅವರು ಕ್ಷಮೆಯಾಚಿಸದಿದ್ದರೆ, ಅವರ ವಿರುದ್ಧ ಕ್ರಿಮಿನಲ್ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಲೀಗಲ್ ನೋಟಿಸ್‌ನಲ್ಲಿ ತಿಳಿಸಿದ್ದಾರೆ.
ಕಳೆದ ತಿಂಗಳು, ಸಂಗೀತ ಸಂಯೋಜಕ ಆರ್.ಡಿ.ಬರ್ಮನ್ ಅವರು ಮಹಾತ್ಮ ಗಾಂಧಿಗಿಂತ ದೊಡ್ಡವರು. ಗಾಂಧಿ ಭಾರತಕ್ಕೆ ಮಾತ್ರವಲ್ಲ ಪಾಕಿಸ್ತಾನಕ್ಕೆ ‘ರಾಷ್ಟ್ರದ ಪಿತಾಮಹ’ ಎಂದು ಹೇಳುವ ಮೂಲಕ ಭಟ್ಟಾಚಾರ್ಯ ವಿವಾದವನ್ನು ಹುಟ್ಟುಹಾಕಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj