HMPV Virus: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ HMPV ಪತ್ತೆ
![baby](https://www.mahanayaka.in/wp-content/uploads/2023/09/baby.jpg)
06/01/2025
ಬೆಂಗಳೂರು: ಚೀನಾದಲ್ಲಿ ಮತ್ತೆ ಹುಟ್ಟಿಕೊಂಡಿರುವ ವೈರಸ್ ಹ್ಯೂಮನ್ ಮೆಟಾನ್ಯೂಮೊ ವೈರಸ್(HMPV) ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ HMPV ಕಂಡು ಬಂದಿದೆ. ಮಗುವಿಗೆ ಜ್ವರ ಬಂದ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ರಕ್ತಪರೀಕ್ಷೆ ವೇಳೆ HMPV ವೈರಸ್ ಪತ್ತೆಯಾಗಿದೆ.
ಮಗುವಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ ಎಂದು ತಿಳಿದು ಬಂದಿದೆ. ಬೆಂಗಳೂರು ಸೇರಿದಂತೆ ಈ ರೀತಿಯ ಸೋಂಕು ಬೇರೆಲ್ಲಿ ಪತ್ತೆಯಾಗಿದೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: