ಬಿಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
![](https://www.mahanayaka.in/wp-content/uploads/2025/01/9872b769c772a7476e519f4a4ba2e7544f461586afceb6e18f0b5a44383c5dc9.0.jpg)
ಬಿಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಗಾಂಧಿ ಮೈದಾನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜನ್ ಸುರಾಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅವರನ್ನು ಪಾಟ್ನಾ ಪೊಲೀಸರು ಸೋಮವಾರ ಮುಂಜಾನೆ ವಶಕ್ಕೆ ಪಡೆದಿದ್ದಾರೆ.
ನಂತರ ಜನ ಸುರಾಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಪ್ರತಿಭಟನಾಕಾರರೊಂದಿಗೆ ಆಮರಣಾಂತ ಉಪವಾಸ ಕುಳಿತಿದ್ದ ಗಾಂಧಿ ಮೈದಾನದಲ್ಲಿನ ಸ್ಥಳವನ್ನು ಪಾಟ್ನಾ ಪೊಲೀಸರು ಖಾಲಿ ಮಾಡಿದರು.
ಅಕ್ರಮಗಳ ಆರೋಪದ ಮೇಲೆ ಬಿಹಾರ ಲೋಕಸೇವಾ ಆಯೋಗದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಬೆಂಬಲಿಸಿ ಜನವರಿ 2 ರಂದು ಆಮರಣಾಂತ ಉಪವಾಸವನ್ನು ಪ್ರಾರಂಭಿಸಿದ ಕಿಶೋರ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ದರು. ಬಂಧನಕ್ಕೆ ಮೊದಲು, ಬಿಪಿಎಸ್ಸಿ ಅಕ್ರಮಗಳಿಗೆ ಸಂಬಂಧಿಸಿದಂತೆ ಪಕ್ಷವು ಜನವರಿ 7 ರಂದು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಿದೆ ಎಂದು ಜನ್ ಸುರಾಜ್ ಮುಖ್ಯಸ್ಥರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj