ಎರಡು ಅಂತಸ್ತಿನ ಕಟ್ಟಡದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಾಯ
![anekkal](https://www.mahanayaka.in/wp-content/uploads/2025/01/anekkal.jpg)
ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಡು ಅಂತಸ್ತಿನ ಕಟ್ಟಡ ಜಖಂಗೊಂಡಿದ್ದು, ಇಬ್ಬರು ಯುವಕರಿಗೆ ಗಾಯವಾಗಿರುವ ಘಟನೆ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ನಡೆದಿದೆ.
ಸ್ಫೋಟಕ್ಕೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ, ಘಟನೆಯಲ್ಲಿ ಕೇರಳ ಮೂಲದ ಸುನೀಲ್ ಜೋಸೆಫ್ ಹಾಗೂ ವಿಷ್ಣು ಜಯರಾಜ್ ಎಂಬವರು ಗಾಯಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಫೋಟದ ತೀವ್ರತೆಗೆ ಕಟ್ಟಡದ ಗೋಡೆಗಳಿಗೆ ಹಾನಿಯಾಗಿದ್ದು, ಗೋಡೆಗಳು ಪುಡಿಪುಡಿಯಾಗಿವೆ. ಕಿಟಕಿ, ಬಾಗಿಲುಗಳು ಛಿದ್ರಗೊಂಡಿವೆ. ಅಕ್ಕಪಕ್ಕದ ನಾಲ್ಕೈದು ಮನೆಗಳಿಗೂ ಹಾನಿಯಾಗಿವೆ. ಜೊತೆಗೆ ಕೆಲವು ವಾಹನಗಳಿಗೂ ಹಾನಿಯಾಗಿವೆ. ಸೂರ್ಯ ಸಿಟಿ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: