ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ದಂಪತಿ, ಇಬ್ಬರು ಮಕ್ಕಳಿಗೆ ಗಾಯ
06/01/2025
ಚಿಕ್ಕಬಳ್ಳಾಪುರ: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಹಿತ ಇಬ್ಬರು ಮಕ್ಕಳಿಗೆ ಗಾಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆ ಬಾವಿ ಬಳಿ ನಡೆದಿದೆ.
ತುಮಕೂರಿನ ಪಾವಗಡದ ರೊಪ್ಪ ಗ್ರಾಮದ ಪವನ್ ಹಾಗೂ ಮಮತಾ ಹಾಗೂ ಇವರ ಮಕ್ಕಳಾದ ವಿಶ್ವಾಸ್ ಹಾಗೂ ಶುಭ್ರತ್ ಗಾಯಗೊಂಡವರು. ಘಟನೆಯಲ್ಲಿ ಒಬ್ಬ ಮಗನ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಾಂಡಿಚೇರಿಗೆ ಪ್ರವಾಸಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx