ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದಿಂದ ವೈಮಾನಿಕ ದಾಳಿ: ಭಾರತ ಖಂಡನೆ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಪಾಕಿಸ್ತಾನಕ್ಕೆ ಅದರ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳುವುದಕ್ಕಾಗಿ ನೆರೆಹೊರೆಯವರನ್ನು ದೂಷಿಸುವುದು ಹಳೆಯ ಚಾಳಿಯಾಗಿಬಿಟ್ಟಿದೆ ಎಂದು ಭಾರತದ ವಿದೇಶಾಂಗ ಇಲಾಖೆ ಟೀಕಿಸಿದೆ.
ಭಯೋತ್ಪಾದಕರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಅಫ್ಘಾನಿಸ್ತಾನದ ವೈಮಾನಿಕ ದಾಳಿ ನಡೆಸಿದ್ದಾಗಿ ಪಾಕ್ ಹೇಳಿತ್ತು.
ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅಫ್ಘಾನ್ ನಾಗರಿಕರ ಮೇಲಿನ ವೈಮಾನಿಕ ದಾಳಿಯಲ್ಲಿ ಹಲವಾರು ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವ ಮಾಧ್ಯಮ ವರದಿಗಳನ್ನು ನಾವು ಗಮನಿಸಿದ್ದೇವೆ. ಅಮಾಯಕ ನಾಗರಿಕರ ಮೇಲಿನ ಯಾವುದೇ ದಾಳಿಯನ್ನು ನಾವು ನಿಸ್ಸಂದಿಗ್ಧವಾಗಿ ಖಂಡಿಸುತ್ತೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
“ತನ್ನ ಆಂತರಿಕ ವೈಫಲ್ಯಗಳಿಗೆ ನೆರೆಹೊರೆಯವರನ್ನು ದೂಷಿಸುವುದು ಪಾಕಿಸ್ತಾನದ ಹಳೆಯ ಅಭ್ಯಾಸವಾಗಿದೆ. ಈ ನಿಟ್ಟಿನಲ್ಲಿ ಅಫ್ಘಾನ್ ವಕ್ತಾರರ ಪ್ರತಿಕ್ರಿಯೆಯನ್ನು ನಾವು ಗಮನಿಸಿದ್ದೇವೆ” ಎಂದು ಇದೇ ವೇಳೆ ಅವರು ಹೇಳಿದರು.
ಪೂರ್ವ ಅಫ್ಘಾನಿಸ್ತಾನದ ಮೇಲೆ ಡಿಸೆಂಬರ್ 24 ರಂದು ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ್ದು, ದಾಳಿಯಲ್ಲಿ 46 ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಇದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj