SSLC ಮಾದರಿ ಪ್ರಶ್ನೆ ಪತ್ರಿಕೆ ಡೌನ್ ಲೋಡ್ ಮಾಡುವುದು ಹೇಗೆ?: ನೇರ ಲಿಂಕ್ ಇಲ್ಲಿದೆ
ಕರ್ನಾಟಕದಲ್ಲಿ SSLC ಪರೀಕ್ಷೆ ಮಾರ್ಚ್ 20ರಿಂದ ಆರಂಭಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ(KSEAB) ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದೀಗ SSLC ಪರೀಕ್ಷೆ 2025ಕ್ಕೆ ಸಂಬಂಧಿಸಿದಂತೆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಮಂಡಲಿ ಬಿಡುಗಡೆ ಮಾಡಿದೆ.
SSLC ಪರೀಕ್ಷೆಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅಭ್ಯಾಸ ನಡೆಸಲು ಈ ಮಾದರಿ ಪ್ರಶ್ನೆ ಪತ್ರಿಕೆಗಳು ಬಹಳಷ್ಟು ಸಹಕಾರಿಯಾಗಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮಾದರಿ ಪ್ರಶ್ನೆ ಪತ್ರಿಕೆಯನ್ನು ಹೇಗೆ ಪಡೆಯಬೇಕು ಎನ್ನುವ ವಿವರಗಳನ್ನು ತಿಳಿಯೋಣ…
ಸರ್ಕಾರದ ಅಧಿಕೃತ ವೆಬ್ ಸೈಟ್ kseab.karnataka.gov.in ನಲ್ಲಿ SSLC ಮಾದರಿ ಪ್ರಶ್ನೆ ಪತ್ರಿಕೆಯನ್ನು ಪ್ರಕಟಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲು ಸಹಕಾರಿಯಾಗಲಿದೆ. ವಿದ್ಯಾರ್ಥಿಗಳಿಗೆ ಸಹಾಯವಾಗಲಿ ಎನ್ನುವ ನಿಟ್ಟಿನಲ್ಲಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪಡೆಯಲು ನೇರ ಲಿಂಕ್ ನ್ನು ಮಹಾನಾಯಕ ನೀಡಿದೆ.
ಮಾದರಿ ಪ್ರಶ್ನೆ ಪತ್ರಿಕೆಯ ಲಿಂಕ್: https://kseeb.karnataka.gov.in/sslc2025modelqp/
ಮೇಲೆ ನೀಡಲಾಗಿರುವ ಲಿಂಕ್ ಗೆ ಕ್ಲಿಕ್ ಮಾಡಿ, ಯಾವ ಮಾದರಿ ಪ್ರಶ್ನೆ ಪತ್ರಿಕೆ ನಿಮಗೆ ಬೇಕು ಅವುಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಮೊಬೈಲ್ ಗಳಲ್ಲೂ ಪ್ರಶ್ನೆ ಪತ್ರಿಕೆ ಡೌನ್ ಲೋಡ್ ಮಾಡಿಕೊಳ್ಳಬಹುದು. ಸೈಬರ್ ಗಳಲ್ಲಿಯೂ ಪ್ರಶ್ನೆ ಪತ್ರಿಕೆ ಪ್ರಿಂಟ್ ತೆಗೆದುಕೊಂಡು ವಿದ್ಯಾರ್ಥಿಗಳು ಅಭ್ಯಾಸ ಮಾಡಬಹುದು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: