ಆನೇಕಲ್: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ದಾರುಣ ಸಾವು
![anekal](https://www.mahanayaka.in/wp-content/uploads/2025/01/anekal.jpg)
ಆನೇಕಲ್ : ಜನವರಿ 6ರಂದು ಬೊಮ್ಮಸಂದ್ರ ಸಮೀಪದ ಕಿತ್ತಗಾನ ಹಳ್ಳಿಯಲ್ಲಿ ನಡೆದ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ತಮಿಳುನಾಡು ಮೂಲದ ವಿಷ್ಣು ಜಯರಾಜ್(30) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಸಿಲಿಂಡರ್ ಸ್ಫೋಟದ ವೇಳೆ ಮನೆಯಲ್ಲಿದ್ದ ಇಬ್ಬರು ಗಾಯಗೊಂಡಿದ್ದರು. ಗಾಯಾಳುಗಳಿಗೆ ನಾರಾಯಣ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿಷ್ಣು ಚಿಂತಾಜನಕ ಸ್ಥಿತಿಯಲ್ಲಿದ್ದ. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಜಯನಗರ ಮೂಲದ ಸುನಿಲ್ ಎಂಬವರಿಗೆ ಸೇರಿದ್ದ ಕಟ್ಟಡದಲ್ಲಿ ಇಬ್ಬರೂ ವಾಸವಿದ್ದರು. ಕೆಲಸಕ್ಕೆ ಹೋಗಲು ಒಬ್ಬ ಸ್ನಾನ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದರು. ಒಬ್ಬ 2 ಅಂತಸ್ತಿನ ಕಟ್ಟಡದಿಂದ ಕೆಳಗೆ ಬಿದ್ದ ಪರಿಣಾಮ ತೀವ್ರ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದರು.
ಸ್ಫೋಟದ ತೀವ್ರತೆಗೆ ಕಟ್ಟಡದ ಗೋಡೆಗಳು ಛಿದ್ರಗೊಂಡಿತ್ತು. ನಾಲ್ಕು ಫಿಲ್ಲರ್ ಗಳು ಒಡೆದು ಹೋಗಿತ್ತು. 3 ಕಾರು, 6 ದ್ವಿಚಕ್ರ ವಾಹನಗಳಿಗೆ ಹಾನಿಯಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: