ಗುತ್ತಿಗೆದಾರ ಸಚಿನ್ ಕೇಸ್: ಪ್ರಿಯಾಂಕ್ ಖರ್ಗೆ ಆಪ್ತ ಸೇರಿದಂತೆ ಐವರ ಬಂಧನ
ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಸಿಐಡಿ ಬಂಧಿಸಿದೆ.
ಬೀದರ್ ಗುತ್ತಿಗೆದಾರ ಸಚಿನ್ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಎನ್ನಲಾಗಿರುವ ರಾಜು ಕಪನೂರು ಸೇರಿದಂತೆ ಒಟ್ಟು 8 ಮಂದಿಯ ಹೆಸರು ಉಲ್ಲೇಖಿಸಿದ್ದರು. ಈ ಸಂಬಂಧ ಬೀದರ್ ನಲ್ಲಿ ಐವರು ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ರಾಜು ಕಪನೂರು, ಘೋರಖ್ ನಾಥ್, ನಂದ ಕುಮಾರ್, ನಾಗಬುಜಂಗಿ, ರಾಮನಗೌಡ ಪಾಟೀಲ್, ಸತೀಶ್ ಬಂಧಿತರು ಎಂದು ತಿಳಿದು ಬಂದಿದೆ. ಡೆತ್ ನೋಟ್ ನಲ್ಲಿ ಉಲ್ಲೇಖವಾಗಿದ್ದ ಹೆಸರಿನವರಿಗೆ ಸಿಐಡಿ ನೋಟಿಸ್ ನೀಡಿತ್ತು, ಆದರೆ ವಿಚಾರಣೆ ವೇಳೆ ಸೂಕ್ತವಾದ ಉತ್ತರಗಳನ್ನು ಆರೋಪಿಗಳು ನೀಡದ ಹಿನ್ನೆಲೆ ಆರೋಪಿಗಳನ್ನು ಬಂಧಿಸಲಾಗಿದೆ. ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲು ಸಿದ್ಧತೆ ನಡೆಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: