ಶತ್ರುಗಳಿಂದ ರಕ್ಷಣೆಗಾಗಿ ಹೋಮ ಮಾಡಿಸಿದ್ದೇನೆ, ಇದರಲ್ಲಿ ಮುಚ್ಚುಮರೆ ಇಲ್ಲ: ಡಿ.ಕೆ.ಶಿವಕುಮಾರ್
![d k shivakumar](https://www.mahanayaka.in/wp-content/uploads/2025/01/d-k-shivakumar-1.jpg)
ಬೆಂಗಳೂರು: ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗಾಗಿ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿ ದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ತಮಿಳುನಾಡಿನ ದೇವಸ್ಥಾನಕ್ಕೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ ಎಂದಿದ್ದಾರೆ.
ನಾನು ಪ್ರತಿ ದಿನ ದೇವರಿಗೆ ನಮಸ್ಕರಿಸದೇ ಮನೆಯಿಂದ ಹೊರಗೆ ಬರುವುದಿಲ್ಲ, ನಾನು ಯಾವ ಶಕ್ತಿಯನ್ನು ನಂಬುತ್ತೇನೋ ಅದರ ಮೇಲೆ ಭಕ್ತಿ, ಪ್ರೀತಿ ಇದ್ದೇ ಇರುತ್ತದೆ ಎಂದರು.
ನನಗೆ ಒಳ್ಳೆಯದಾಗಲಿ ಎಂದು ಪ್ರತಿ ದಿನವೂ ಪೂಜಿಸುತ್ತೇನೆ, ನನಗೆ ತೊಂದರೆ ಕೊಡುವವರಿಂದ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ ಎಂದು ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರಲ್ಲದೇ, ನಿಮ್ಮಿಂದಲೂ ನಮಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ ಎಂದು ಮಾಧ್ಯಮಗಳನ್ನುದ್ದೇಶಿಸಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: